ಇಪ್ಪತ್ತು ಸಾವಿರ ರೂಪಾಯಿಗೆ ಕೈ ಹಾಕಿ ಲಕ್ಷ ಲಕ್ಷ ರೂಪಾಯಿ ಕಳೆದುಕೊಂಡ ಅಧಿಕಾರಿ…..

Suddi Sante Desk

ಚಿತ್ರದುರ್ಗ –

ಇದೊಂದು ಇಪ್ಪತ್ತು ಸಾವಿರ ರೂಪಾಯಿ ಲಂಚಕ್ಕೆ ಕೈ ಹಾಕಿ ಏಳು ಲಕ್ಷ ರೂಪಾಯಿ ಕಳೆದುಕೊಂಡ ಅಧಿಕಾರಿಯೊಬ್ಬರ ಕಥೆ‌. ಹೌದು ಚಿತ್ರದುರ್ಗ ದ ಚಳ್ಳಕೆರೆ ಯ ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀಧರ್ ನಿನ್ನೆಯಷ್ಟೇ ಹಳೆಯ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ PDO ಗೆ ಇಪ್ಪತ್ತು ಸಾವಿರ ರೂಪಾಯಿ ಹಣದ ಬೇಡಿಕೆ ಇಟ್ಟಿದ್ದರು.ಕೊನೆಯಲ್ಲಿ ಈ ಕುರಿತು ಎಸಿಬಿ ಗೆ ದೂರು ನೀಡಿದ PDO ತಾಲ್ಲೂಕು ಪಂಚಾಯತ EO ನನ್ನು ಎಸಿಬಿ ಬಲೆಗೆ ಹಾಕಿಸಿದ್ದರು.

ನಂತರ ವಿಚಾರಣೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗೆ ಅಧಿಕಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದರು.ನಂತರ ಅಧಿಕಾರಿಯ ಮನೆಯ ಮೇಲೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳಿಗೆ 6 ಲಕ್ಷ ರೂ ನಗದು ಸೇರಿದಂತೆ ಅನೇಕ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ಪಂಚಾಯತಿ ಇಒ ಶ್ರೀಧರ್ ನಿವಾಸದ ಮೇಲೆ ಕೂಡ ಎಸಿಬಿ ಅಧಿಕಾರಿಗಳು ಇಂದು ದಾಳಿ ಮಾಡಿ ಲಕ್ಷ ಲಕ್ಷ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ

ಚಿತ್ರದುರ್ಗ ಜಿಲ್ಲೆಯ ಮಹಾವೀರ ಬಡಾವಣೆ ಯಲ್ಲಿರುವ ಶ್ರೀಧರ್ ನಿವಾಸದಲ್ಲಿ ಎಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದು, ಕಚೇರಿಯ ಅನೇಕ ಕಡತ ಹಾಗೂ ಇತರೆ ದಾಖಲೆಗಳನ್ನು ವಶಪಡಿಸಿಕೊಂಡಿದ್ದು ತನಿಖೆಯನ್ನು ಮುಂದುವರೆಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.