ಹೊಸಪೇಟೆ ವಿಜಯನಗರ –
ಕರ್ತವ್ಯ ಲೋಪ ಪ್ರಕರಣವೊಂದಕ್ಕೆ ಸಂಬಂಧಿಸಿ ದಂತೆ ಬಸ್ ನಿರ್ವಾಹಕರೊಬ್ಬರಿಂದ ₹20 ಸಾವಿರ ಲಂಚ ಪಡೆಯುತ್ತಿದ್ದಾಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್‌ಟಿಸಿ) ವಿಭಾಗೀಯ ನಿಯಂತ್ರಣಾಧಿಕಾರಿ (ಡಿ.ಸಿ) ವಿ.ಎಸ್.ಜಗದೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಇಲಾಖಾ ವಿಚಾರಣೆಯನ್ನು ಕೈಬಿಡಲು ಡಿ.ಸಿ ಅವರು ₹25 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ ₹5 ಸಾವಿರ ಮುಂಗಡವಾಗಿ ಪಡೆದಿದ್ದರು. ಉಳಿದ ₹20 ಸಾವಿರವನ್ನು ಇಲ್ಲಿನ ಕೆಕೆಆರ್‌ಟಿಸಿ ಬಸ್ ನಿಲ್ದಾಣದ ಮೊದಲ ಮಹಡಿಯಲ್ಲಿರುವ ತಮ್ಮ ಕಚೇರಿಯಲ್ಲಿ ಪಡೆಯುತ್ತಿದ್ದಾಗ ಲೋಕಾ ಯುಕ್ತ ಪೊಲೀಸರ ದಾಳಿ ನಡೆಯಿತು.
ನಗದು ಸಮೇತ ಡಿ.ಸಿ ಸಿಕ್ಕಿಬಿದ್ದಿದ್ದು ಬಳ್ಳಾರಿ ಲೋಕಾಯುಕ್ತ ಎಸ್‌ಪಿ ಸಿದ್ದರಾಜು ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದ್ದು ತನಿಖೆ ಮಾಡಲಾಗುತ್ತಿದೆ.
ಸುದ್ದಿ ಸಂತೆ ನ್ಯೂಸ್ ಹೊಸಪೇಟೆ…..