ಚಿಕ್ಕೋಡಿ –
ಹಾಡಹಗಲೇ ಬೈಕ್ ಕದಿಯಲು ಯತ್ನಿಸಿದ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ.

ಬೆಳಗಾವಿಯ ಅಥಣಿ ಪಟ್ಟಣದಲ್ಲಿ ಹಾಡು ಹಗಲೇ ಮಾರುಕಟ್ಟೆ ಪ್ರದೇಶದಲ್ಲಿ ಬೈಕ್ ಕಳ್ಳತನ ಮಾಡಲು ಶಿವಾಜಿ ಸಲಗರ ಎಂಬ ವ್ಯಕ್ತಿ ಬಂದಿದ್ದನು. ಕಳ್ಳತನ ಮಾಡೊದನ್ನು ನೋಡಿದ ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.

ಬೆಳಗಾವಿಯ ಜಿಲ್ಲೆಯ ಅಥಣಿ ಪಟ್ಟಣದ ಮಾರುಕಟ್ಟೆಯಲ್ಲಿ ಈ ಒಂದು ಘಟನೆ ನಡೆದಿದೆ.
ಶಿವಾಜಿ ಸಲಗರ ಎಂಬ ವ್ಯಕ್ತಿಗೆ ಥಳಿಸಿದ ಸಾರ್ವಜನಿಕರು ಪೊಲೀಸರಿಗೆ ಆರೋಪಿಯನ್ನು ಒಪ್ಪಿಸಿದ್ದಾರೆ.ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.