ಮಡಿಕೇರಿ –
ಕಾಲೇಜು ಅವಧಿಯಲ್ಲಿಯೇ ಸಮವಸ್ತ್ರದಲ್ಲಿ ಬಾರಿ್ ಗೆ ಹೋಗಿ ಪಾರ್ಟಿ ಮಾಡುತ್ತಿದ್ದ ಪದವಿ ಕಾಲೇಜಿನ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ರೆಡ್‍ಹ್ಯಾಂಡ್ ಆಗಿ ಹಿಡಿದಿದ್ದಾರೆ. ಅಲ್ಲದೇ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಮತ್ತು ಸರಾಯಿ ಕೊಟ್ಟ ಬಾರ್ ಮಾಲೀಕರುನ್ನು ಪ್ರಾಂಶುಪಾಲರು ತರಾಟೆಗೆ ತೆಗೆದುಕೊಂಡು ಬುದ್ಧಿವಾದ ಹೇಳಿದ ಘಟನೆ ವಿರಾಜಪೇಟೆ ಪಟ್ಟಣದಲ್ಲಿ ಈಚೆಗೆ ನಡೆದಿದೆ.
ಹೌದು ಪಟ್ಟಣದ ಕಾಲೇಜ ವೊಂದರ ವಿದ್ಯಾರ್ಥಿಗಳು ಹಾಗೂ ಇತರ ವಿದ್ಯಾರ್ಥಿಗಳು ಪಟ್ಟಣದ ವ್ಯಾಪ್ತಿಯಲ್ಲಿನ ಬಾರೊಂದರಲ್ಲಿ ಬೆಳಿಗ್ಗೆ ಪಾರ್ಟಿ ಮಾಡುತ್ತಿರುವ ಕುರಿತು ಮಾಹಿತಿ ಪಡೆದ ಆ ಕಾಲೇಜಿನ ಪ್ರಾಂಶುಪಾಲರು, ಕಾಲೇಜಿನ ಕೆಲ ಸಿಬ್ಬಂದಿ ವಿದ್ಯಾರ್ಥಿಗಳನ್ನು ಕರೆತರಲು ತಕ್ಷಣ ಬಾರಿನ ಸಮೀಪ ತೆರಳಿದ್ದಾರೆ.
ಪ್ರಾಂಶುಪಾಲರು ಬಾರಿನ ಹೊರಗೆ ಕಾದಿರುವ ವಿಚಾರ ತಿಳಿದ ಕೆಲವು ವಿದ್ಯಾರ್ಥಿಗಳು ಕೂಡಲೇ ಸ್ಥಳದಿಂದ ಪಲಾಯನ ಮಾಡಿದ್ದಾರೆ.
ಆದರೂ, ಕೆಲವು ವಿದ್ಯಾರ್ಥಿಗಳು ಬಾರಿನಿಂದ ಹೊರಗೆ ಬರದಿರುವುದನ್ನು ಮನಗಂಡ ಪ್ರಾಂಶುಪಾಲರು ಬಾರಿನ ಒಳಗೆ ಹೋಗಿ ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದುಕೊಂಡು ಬುದ್ಧಿವಾದ ಹೇಳಿದ್ದಾರೆ. ಬಳಿಕ ಬಾರಿನಲ್ಲಿದ್ದ ಮೇಲ್ವಿಚಾರಕನನ್ನು ಕುರಿತು ವಿದ್ಯಾರ್ಥಿಗಳಿಗೆ ಈ ವಿಚಾರದಲ್ಲಿ ಸಹಕಾರ ನೀಡುವುದು ಸರಿಯಲ್ಲ ಎಂದು ತರಾಟೆಗೆ ತೆಗೆದುಕೊಂಡು ಎಚ್ಚರಿಸಿದ್ದಾರೆ.
ಬಳಿಕ ವಿದ್ಯಾರ್ಥಿಗಳ ಪೋಷಕರನ್ನು ಕಾಲೇಜಿಗೆ ಕರೆಸಿ, ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಬುದ್ಧಿವಾದ ಹೇಳಿದ್ದಾರೆ. ಇಂತಹ ಘಟನೆ ಮತ್ತೊಮ್ಮೆ ಮರುಕಳಿಸಿದರೆ ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ವಿದ್ಯಾರ್ಥಿಗಳಿಗೆ ಎಚ್ಚರಿಸಿದ್ದಾರೆ ಎನ್ನಲಾಗಿದೆ.
ಈ ಕುರಿತು ಬಾರ್ ನಲ್ಲಿ ನಡೆದ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಪ್ರಾಂಶುಪಾಲರು ಹಾಗೂ ಕಾಲೇಜಿನ ಸಿಬ್ಬಂದಿ ಕಾರ್ಯಕ್ಕೆ ಪೋಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.