ಹುಬ್ಬಳ್ಳಿ –
ರೈತನೊರ್ವ ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಶೆರೆವಾಡ ಗ್ರಾಮದಲ್ಲಿ ನಡೆದಿದೆ. ಸಿದ್ದಪ್ಪ ಯಲ್ಲಪ್ಪ ಮಂತ್ರೊಡಿ ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾದ ರೈತನಾಗಿದ್ದಾರೆ.ಗ್ರಾಮದ ಜಮೀನಿನಲ್ಲಿ ಅಸ್ವಸ್ಥನಾಗಿ ಬಿದ್ದಿದ್ದರು ನೋಡಿದ ಕೂಡಲೇ ಆಸ್ಪತ್ರೆಗೆ ಸೇರಿಸಲಾಯಿತು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವಿಗೀಡಾದ್ದು ಇನ್ನೂ ಸ್ಥಳಕ್ಕೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಇನ್ನೂ ಆತ್ಮಹತ್ಯೆಗೆ ನಿಖರವಾದ ಕಾರಣವನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.