ಕಾಪು –
ಪೊಲೀಸ್ ಪೇದೆ ಆತ್ಮಹತ್ಯೆ – ಆತ್ಮಹತ್ಯೆ ಗೆ ಕಾರಣ ಹುಡುಕುತ್ತಿರುವ ಪೊಲೀಸರು ಇಲ್ಲಿನ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೋ ರ್ವರು ಪೊಲೀಸ್ ಕ್ವಾಟ್ರಸ್ ನಲ್ಲಿಯೇ ನೇಣಿಗೆ ಶರಣಾದ ಘಟನೆ ನಡೆದಿದೆ.ಜ್ಯೋತಿ (29) ಮೃತ ಮಹಿಳಾ ಪೊಲೀಸ್ ಸಿಬ್ಬಂದಿಯಾಗಿದ್ದು ಆತ್ಮಹ. ತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಬೆಳಿಗ್ಗೆ ನೇಣಿಗೆ ಶರಣಾಗಿ ರುವುದಾಗಿ ತಿಳಿದು ಬಂದಿದೆ.ಮೃತ ಪೊಲೀಸ್ ಸಿಬ್ಬಂದಿಯ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಯಾಗಿದ್ದು ಪತಿ ಬೆಳಿಗ್ಗೆ ಕರ್ತವ್ಯಕ್ಕೆ ಹೋಗಲೆಂದು ಹೊರಟಿದ್ದು ಈ ವೇಳೆ ಪತ್ನಿ ಜ್ಯೋತಿ ನೇಣಿಗೆ ಕೊರಳೊಡ್ಡಿರುವುದನ್ನು ಗಮನಿಸಿದ್ದರು.
ಕೂಡಲೇ ಪಕ್ಕದಲ್ಲಿರುವ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಮೊದಲಾ ದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಸುದ್ದಿ ಸಂತೆ ನ್ಯೂಸ್ ಕಾಪು…..