ಶಿಕ್ಷಣ ಸಚಿವರ ಕಾರ್ಯಕ್ರಮಕ್ಕೆ ಅಡ್ಡಿ ಮುತ್ತಿಗೆ ಹಾಕಲು ಯತ್ನ ಪೊಲೀಸರಿಂದ ವಿರೋಧಿಸಿದವರ ಬಂಧನ…..

Suddi Sante Desk

ಮಂಗಳೂರು –

ಮಂಗಳೂರಿನ ಹಂಪನಕಟ್ಟೆ ಬಳಿ ಪದವಿ ಪೂರ್ವ ಕಾಲೇಜು ಕಟ್ಟಡ ಶಿಲಾನ್ಯಾಸಕ್ಕೆ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ್ದರು.ಈ ವೇಳೆ ಸಮವಸ್ತ್ರ ಹಂಚಿಕೆಯಲ್ಲಿ ಸಚಿವರಿಂದ ಗೋಲ್ ಮಾಲ್ ನಡೆದಿದೆ ಎಂದು ಆರೋ ಪಿಸಿ ಸಿಎಫ್‌ಐ ಪ್ರತಿಭಟನೆಗಿಳಿದಿತ್ತು.ಅಲ್ಲದೆ ನಾಗೇಶ್ ಕಾರ್ಯಕ್ರಮಕ್ಕೆ ನುಗ್ಗಲು ಸಿಎಫ್‌ಐ ಕಾರ್ಯಕರ್ತರು ಮುಂದಾಗಿದ್ದಾರೆ. ಆದರೆ ಕಾರ್ಯಕರ್ತರನ್ನು ಪೊಲೀಸರು ರಸ್ತೆಯಲ್ಲೇ ತಡೆದು ನಿಲ್ಲಿಸಿದ್ದಾರೆ.ಬಿ.ಸಿ. ನಾಗೇಶ್ ಗೋ ಬ್ಯಾಕ್ ಎಂದು ಘೋಷಣೆ ಕೂಗಿ ಧಿಕ್ಕಾರ ಘೋಷಿಸುತ್ತಾ ಕಾರ್ಯಕ್ರಮಕ್ಕೆ ನುಗ್ಗಲು ಯತ್ನಿಸಿದ್ದರು.

ಶಿಕ್ಷಣ ಸಚಿವ ಬಿ‌.ಸಿ. ನಾಗೇಶ್ ಅವರು ಭಾಗವಹಿಸಿದ ಕಾರ್ಯಕ್ರಮಕ್ಕೆ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರು ಅಡ್ಡಿ ಪಡಿಸಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ ಹೌದು ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿ ದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.