ಆತ್ಮಹತ್ಯೆಗೆ ಯತ್ನಿಸಿದ ಯುವತಿಯ ರಕ್ಷಣೆ ಮಾಡಿದ ಪೊಲೀಸರು

Suddi Sante Desk

ಬೆಂಗಳೂರು –

ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಳಿ ಮೇಲೆ ನಿಂತು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿದ್ದ ಯುವತಿಯನ್ನು ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ರಕ್ಷಿಸಿದ್ದಾರೆ.

‘ಯಶವಂತಪುರ ನಿವಾಸಿಯಾದ 20 ವರ್ಷದ ಯುವತಿ, ಪದವೀಧರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅವರಿಗೆ ವರ್ಷಗಳ ಹಿಂದಷ್ಟೇ ಮದುವೆಯಾಗಿತ್ತು. ಅವರು ಆತ್ಮಹತ್ಯೆ ಯತ್ನಿಸುತ್ತಿದ್ದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು.ಸ್ಥಳಕ್ಕೆ ಹೋಗಿ ಅವರನ್ನು ರಕ್ಷಿಸಿ ಪೋಷಕರ ಜೊತೆ ಕಳುಹಿಸಲಾಗಿದೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

‘ಕ್ಷುಲ್ಲಕ ಕಾರಣಕ್ಕಾಗಿ ಮನೆಯಲ್ಲಿ ಜಗಳ ಮಾಡಿಕೊಂಡಿದ್ದ ಯುವತಿ ಜಾಲಹಳ್ಳಿಯ ಜೆ.ಪಿ.ಪಾರ್ಕ್ ಸಮೀಪದ ರೈಲ್ವೆ ಹಳಿ ಮೇಲೆ ನಿಂತಿದ್ದರು.

ಅದನ್ನು ಗಮನಿಸಿದ ಸ್ಥಳೀಯರು, ಸಹಾಯವಾಣಿ 112ಕ್ಕೆ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿಸಿದ್ದರು. ಹೊಯ್ಸಳ ಗಸ್ತು ವಾಹನದಲ್ಲಿದ್ದ ಭಾಗ್ಯಮ್ಮ ಹಾಗೂ ಮತ್ತೊಬ್ಬ ಸಿಬ್ಬಂದಿ, ಕೂಡಲೇ ಸ್ಥಳಕ್ಕೆ ಹೋಗಿ ಯುವತಿಯನ್ನು ರಕ್ಷಿಸಿದ್ದಾರೆ. ಪತಿ ಹಾಗೂ ಅವರ ಕುಟುಂಬದವರನ್ನು ಠಾಣೆಗೆ ಕರೆಸಿ, ಅವರ ಸಮ್ಮುಖದಲ್ಲೇ ಯುವತಿಗೆ ಬುದ್ದಿವಾದ ಹೇಳಿ ಕಳುಹಿಸಿದ್ದಾರೆ ಜಾಲಹಳ್ಳಿ ಪೊಲೀಸರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.