ಬೆಂಗಳೂರು –
PSI ಪರೀಕ್ಷೆಯಲ್ಲಿ ಪ್ರಾಮಾಣಿಕವಾಗಿ ಬರೆದು ಪಾಸಾಗಿ ರುವ ನಮ್ಮ ಆಯ್ಕೆಯನ್ನು ರದ್ದುಗೊಳಿಸಿ ಮರು ಪರೀಕ್ಷೆ ಮಾಡುತ್ತಿರುವುದನ್ನು ವಿರೋಧಿಸಿ ಆಯ್ಕೆಯಾದ ಅಭ್ಯರ್ಥಿ ಗಳು ಬೆಂಗಳೂರಿನಲ್ಲಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಹೌದು ಪರೀಕ್ಷೆಗಾಗಿ ಐದಾರು ವರ್ಷಗಳಿಂದ ತಯಾರಿ ಮಾಡಿದ್ದೇವೆ.ಕೆಲಸ ಕಾರ್ಯಗಳನ್ನು ಬಿಟ್ಟು,ಹಗಲು ರಾತ್ರಿ ಎನ್ನದೆ ಶ್ರಮ ಹಾಕಿ ಪಾಸ್ ಮಾಡಿದ್ದೇವೆ.ಈಗ ನಮಗೆ ಈ ಕೆಲಸ ಸಿಗದಿದ್ದರೆ ನಮ್ಮ ವಯೋಮಿತಿ ದಾಟಲಿದ್ದು ನಮ್ಮ ಪರಿಶ್ರಮವೆಲ್ಲ ವ್ಯರ್ಥವಾಗುತ್ತದೆ. ಬೇರೆಯವರು ಮಾಡಿದ ತಪ್ಪಿಗೆ ನಮಗೇಕೆ ಶಿಕ್ಷೆ ಎಂದು ಪ್ರಶ್ನಿಸಿದ್ದಾರೆ.ಯಾರು ಅಕ್ರಮ ಮಾಡಿದ್ದಾರೋ ಅವರನ್ನು ಹೊರಹಾಕಲಿ, ಯಾವುದೇ ತಪ್ಪು ಮಾಡದ ನಮ್ಮ ತಲೆದಂಡ ಯಾಕೆ ನಾವು ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಮಾಡು ತ್ತಿದ್ದಾರೆ.
ಇನ್ನೂ ನಮ್ಮ ವಿರುದ್ಧ ಎಫ್‌ಐಆರ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ.ನಮ್ಮ ವಿರುದ್ಧ ಎಫ್‌ಐಆರ್ ದಾಖಲಾ ದರೆ ಮತ್ತೆ ಯಾವುದೇ ಸರಕಾರಿ ಹುದ್ದೆಗೆ ನಾವು ಅರ್ಹತೆ ಹೊಂದಿರುವುದಿಲ್ಲ ಹೀಗಾಗಿ ಈ ವಿಚಾರದಲ್ಲಿ ನೀವೇ ನಮಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದು ಹೇಗೆ,ಪರೀಕ್ಷೆಯಲ್ಲಿ ಅಕ್ರಮವೆಸಗಿದ್ದು ಹೇಗೆ,ಪೇಪರ್ ಮಾಫಿಯಾದ ನಿಜವಾದ ರಕ್ಷಕರು ಯಾರು ಎಂಬ ಪ್ರಶ್ನೆಯನ್ನು ಕೇಳತಾ ಇದ್ದಾರೆ ಪರೀಕ್ಷೆಯಲ್ಲಿ ಪ್ರಾಮಾಣಿಕವಾಗಿ ಬರೆದು ಪಾಸಾಗಿರುವ ವರಿಗೆ ಅನ್ಯಾಯ ಆಗಬಾರದು.ಯಾರು ತಪ್ಪು ಮಾಡಿ ದ್ದಾರೆ ಎಂಬುದು ತನಿಖೆಯಲ್ಲಿ ಗೊತ್ತಾಗುವುದಿಲ್ಲವೇ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಯಾಕೆ ಶಿಕ್ಷೆ? ತಪ್ಪು ಮಾಡಿ ರುವ ಅಭ್ಯರ್ಥಿಗಳನ್ನು ಭವಿಷ್ಯದಲ್ಲಿ ಸರಕಾರಿ ಉದ್ಯೋಗ ದಿಂದ ದೂರ ಇಡಬೇಕೆಂದು ಒತ್ತಾಯವನ್ನು ಮಾಡಿದ್ದಾರೆ.