ಬೆಂಗಳೂರು –
ರಾಜ್ಯ ಸರ್ಕಾರದಿಂದ ಶಿಕ್ಷಕರ ಹುದ್ದೆ ಆಕಾಂಕ್ಷಿ ಗಳಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಯಲ್ಲಿ ಖಾಲಿ ಇರುವಂತ 5,267 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊ ಳ್ಳಲು ಅನುಮತಿ ನೀಡಿದೆ.ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿ ಸಿದ್ದಾರೆ.
ಅದರಲ್ಲಿ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕ 103ರಲ್ಲಿ “ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು,ಉಪನ್ಯಾಸಕರುಗ ಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದಿದ್ದಾರೆ
ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂ ರಾಗಿ ವಸ್ತುತ ಖಾಲಿ ಇರುವ ಒಟ್ಟು 6584 ಶಿಕ್ಷಕರ ಹುದ್ದೆಗಳ ವೈಕಿ ಶೇ. 80 ರಷ್ಟು ಅಂದರೆ ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡು ವಂತೆ ಕೋರಿ ಹುದ್ದೆಗಳ ವಿವರಗಳೊಂದಿಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರಿಗೆ ಸರ್ಕಾರಕ್ಕೆ ವುಸ್ತಾವನೆಯನ್ನು ಸಲ್ಲಿಸಿರು ತ್ತಾರೆ.
2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿ ಘೋಷಿಸಿರುವಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಒಟ್ಟು 6584 ಶಿಕ್ಷಕರ ಹುದ್ದೆಗಳ ಪೈಕಿ ಶೇ. 80 ರಷ್ಟು ಅಂದರೆ ಈ ಕೆಳಗೆ ವಿವರಿಸ ಲಾದಂತ ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಿ ಆದೇಶಿಸಿದೆ
ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕ ಹುದ್ದೆಗಳ ಭರ್ತಿ ವಿವರ ಹೀಗಿದೆ
ಪಿಜಿಟಿ 1 ರಿಂದ 5ನೇ ತರಗತಿ ಶಿಕ್ಷಕರು – 4,424 ಹುದ್ದೆಗಳು
ಜಿಪಿಟಿ 6 ರಿಂದ 8ನೇ ತರಗತಿ ಶಿಕ್ಷಕರು – 78 ಹುದ್ದೆ
ಪಿಇಟಿ ( ಗ್ರೇಡ್-2) ಶಿಕ್ಷಕರು – 380 ಹುದ್ದೆಗಳು
ಎಸ್ ಇಸಿ ಎಎಂ ಶಿಕ್ಷಕರು – 121 ಹುದ್ದೆಗಳು
ಎಸ್‌ಇಸಿ ಪಿಇಟಿ ಶಿಕ್ಷಕರು – 216 ಹುದ್ದೆಗಳು
ಎಸ್‌ಇಸಿ ಎಸ್ ಪಿಎಲ್ ಶಿಕ್ಷಕರು – 48
ಒಟ್ಟು ಹುದ್ದೆಗಳ ಸಂಖ್ಯೆ 5,267
ಹುದ್ದೆಗಳ ನೇಮಕಾತಿಗೆ ಪೂರ್ವ ಪುಕ್ರಿಯೆಗಳು ಮುಕ್ತಾಯಗೊಂಡ ನಂತರ ಮತ್ತು ನೇಮಕಾತಿ ಆದೇಶ ನೀಡುವ ಮೊದಲು ಸದರಿ ಹುದ್ದೆಗಳಿಗೆ ತಗಲಬಹುದಾದ ಆರ್ಥಿಕ ಆಯವ್ಯಯವನ್ನು ಅಂದಾಜಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದಾರೆ.
ಸದರಿ ಆದೇಶವನ್ನು ಆರ್ಥಿಕ ಇಲಾಖೆಯು ಟಿಪ್ಪಣಿ ಸಂಖ್ಯೆ: ಆಇ 389 ವೆಚ್ಚ-8/2024, ದಿನಾಂಕ: 03.10.2024ರಲ್ಲಿ ನೀಡಿರುವ ಅಭಿಪ್ರಾಯದನ್ವಯ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..