ನವದೆಹಲಿ –
ಕೃಷಿ ಕಾನೂನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರ ರೂಪ ಪಡೆದುಕೊಂಡಿದೆ.
ಪೊಲೀಸರು ಹಾಗೂ ರೈತರ ನಡುವೆ ಘರ್ಷಣೆ ನಡೆದಿದ್ದು, ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಲಾಠಿ ಚಾರ್ಜ್, ಟಿಯರ್ ಗ್ಯಾಸ್ ಪ್ರಯೋಗಿಸಿದ್ದಾರೆ.
ಸಾವಿರಾರು ರೈತರು ಟ್ರಾಕ್ಟರ್ ಗಳೊಂದಿಗೆ ಎಲ್ಲರೂ ಕೆಂಪುಕೋಟೆ ಕಡೆ ತೆರಳಿದ ವೇಳೆ ಪೊಲೀಸರು ಹಾಗೂ ರೈತರ ಮಧ್ಯೆ ಸಂಘರ್ಷ ಉಂಟಾಯಿತು.
ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರೈತರು ಕೆಂಪುಕೋಟೆಗೆ ಲಗ್ಗೆ ಹಾಕಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ದೆಹಲಿಯಲ್ಲಿ 11 ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.