ನವದೆಹಲಿ –
ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 39 ರೂ. ಇಳಿಕೆ ಹೌದು 19 ಕಿಲೋ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 39 ರೂ. ಕಡಿಮೆ ಆಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ.
ರಾಷ್ಟ್ರರಾಜಧಾನಿ ನಗರಿ ದೆಹಲಿಯಲ್ಲಿ 1796.50 ರೂ ಇದ್ದ ಕಮರ್ಷಿಯಲ್ ಸಿಲಿಂಡರ್ ಬೆಲೆ 1757.50 ರುಪಾಯಿಗೆ ಇಳಿದಿದೆ. ಬೆಂಗಳೂರು ಸೇರಿದಂತೆ ಎಲ್ಲಾ ಕಡೆಯೂ 19 ಕಿಲೋ ಕಮರ್ಷಿ ಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇಳಿಮುಖ ವಾಗಿದೆ.ಆದರೆ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ದರದಲ್ಲಿ ವ್ಯತ್ಯಯವಾಗಿಲ್ಲ.
ಸುದ್ದಿ ಸಂತೆ ನ್ಯೂಸ್ ನವದೆಹಲಿ…..






















