ಕಡೂರು –
ಎನ್‌ಪಿಎಸ್ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸು ವಂತೆ ಒತ್ತಾಯಿಸಿ ಪಟ್ಟಣದ NPS ನೌಕರರ ಬಳಗವು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು
ಪಟ್ಟಣದ ಗಣಪತಿ ಪೆಂಡಾಲ್ ಆವರಣದಿಂದ ಶಾಸಕ ಬೆಳ್ಳಿಪ್ರಕಾಶ್ ಅವರ ಕಚೇರಿಯವರೆಗೆ ಮೌನ ಮೆರವಣಿಗೆಯಲ್ಲಿ ಸಾಗಿ ಮನವಿ ಸಲ್ಲಿಸಲಾಯಿತು.ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಎನ್‌ಪಿಎಸ್ ರದ್ದುಗೊಳಿಸುವ ಬಗ್ಗೆ ನೌಕರರ ಪರವಾಗಿ ಧ್ವನಿ ಎತ್ತಬೇಕೆಂದು ಪ್ರತಿಭಟನಕಾರರು ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಶಾಸಕ ಬೆಳ್ಳಿಪ್ರಕಾಶ್ ಮಾತನಾಡಿ ಹೋರಾಟದಲ್ಲಿ ನಾನೂ ಭಾಗಿ ಯಾಗಿದ್ದೇನೆ ನೂತನ ಪಿಂಚೂಣಿ ಯೋಜನೆ ಯನ್ನು ಕೈ ಬಿಟ್ಟು ಹಳೆಯ ಪಿಂಚಣಿ ಯೋಜನೆ ಯನ್ನೇ ಉಳಿಸಬೇಕೆಂಬ ಬೇಡಿಕೆಗೆ ನನ್ನ ಸಹಮತವಿದೆ. ಹೊಸ ಯೋಜನೆಯಿಂದ ನೌಕರರಿಗೆ ಬಹಳಷ್ಟು ತೊಂದರೆಯಾಗುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವರಿಕೆ ಮಾಡಲು ಪ್ರಯತ್ನಿಸುತ್ತೇನೆ ಎಂದರು.
ತಹಶೀಲ್ದಾರ್ ಜೆ.ಉಮೇಶ್, ಸರಕಾರಿ ಎನ್‌ಪಿಎಸ್ ನೌಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಸ್. ಪ್ರಶಾಂತ್, ಕಾರ್ಯದರ್ಶಿ ಲೋಕೇಶ್, ಸೋಮೇಶ್ವರ ಪ್ರಸನ್ನ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಆರ್. ಸುರೇಶ್,ಪ್ರಧಾನ ಕಾರ್ಯದರ್ಶಿ ಅರೇಹಳ್ಳಿ ಮಲ್ಲಿಕಾರ್ಜುನ್,ಜಗದೀಶ್,ಗೀತಾ,ಲಿಂಗರಾಜು,ಭೈರೇಗೌಡ, ಸಿಡಿಪಿಒ ಪ್ರೇಮ್‌ಕುಮಾರ್, ಮಂಜಯ್ಯ, ವೈ.ಎಂ.ತಿಪ್ಪೇಶ್, ಎಂ.ಬಿ. ಮಂಜುನಾಥ್, ರಾಜು,ತಿಮ್ಮಪ್ಪ, ಬಿ. ಮೋಹನ್ ಇದ್ದರು.
ಸುದ್ದಿ ಸಂತೆ ನ್ಯೂಸ್…..