ಉಳ್ಳಾಲ –
ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಶಿಥಿಲಾವಸ್ಥೆಯ ಲ್ಲಿದ್ದ ಶಾಲೆ ಕಟ್ಟಡ ಕುಸಿದುಬಿದ್ದಿದೆ.ಹೌದು ಉಡುಪಿ ಯ ಕಿನ್ಯಾ ಬೆಳರಿಂಗೆ ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೇ ಕಟ್ಟಡ ಕುಸಿದುಬಿದ್ದಿದೆ.ಸಮೀಪದಲ್ಲೇ ಹೊಸ ಕಟ್ಟಡ ನಿರ್ಮಿಸಲಾಗಿದ್ದು ಅದರಲ್ಲಿ ತರಗತಿಗಳು ನಡೆಯುತ್ತಿದ್ದುದರಿಂದ ತರಗತಿ ನಡೆಸಲು ಅಡಚಣೆಯಾ ಗಿಲ್ಲ.ಹಳೇ ಕಟ್ಟಡ ಕೆಡವಲು ಗ್ರಾಮ ಪಂಚಾಯಿತಿಯಿಂದ ಶಿಕ್ಷಣ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅನುಮತಿ ನೀಡದ್ದರಿಂದ ಕಟ್ಟಡ ಕೆಡವಲು ಸಾಧ್ಯವಾಗಿಲ್ಲ ಎಂದು ಗ್ರಾ.ಪಂ.ಸದಸ್ಯ ಸಿರಾಜ್ ತಿಳಿಸಿದ್ದಾರೆ.
ಮೋಡ ಕವಿದ ವಾತಾವರಣವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೆ ಹಲವೆಡೆ ಮಳೆ ಮುಂದುವರಿದಿದೆ.ಬೆಳಿಗ್ಗೆಯಿಂದ ತುಂತುರು ಮಳೆಯಾಗುತ್ತಿದೆ.ಮಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಸಂಜೆಯಿಂದ ಮಳೆಯಾಗುತ್ತಿದೆ