ಬೆಂಗಳೂರು –
ಹೌದು ಕಳೆದ ಶೈಕ್ಷಣಿಕ ವರ್ಷದಲ್ಲಿ SSLC ಫಲಿತಾಂಶದಲ್ಲಿ ಅತ್ಯಂತ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿರುವ ಪ್ರೌಢಶಾಲೆಗಳ ಶಿಕ್ಷಕರ ಒಂದು ವಾರ್ಷಿಕ ಬಡ್ತಿ ತಡೆ ಹಿಡಿಯಲಾಗಿದೆ. ಕೆಲವು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ವಿಷಯವಾರು ಸರಾಸರಿಗಿಂತ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳ ವಿಷಯವಾರು ಶಿಕ್ಷಕರ ಒಂದು ವಾರ್ಷಿಕ ಬಡ್ತಿಯನ್ನು ತಡೆ ಹಿಡಿಯಬೇಕು. ಕೈಗೊಂಡ ಕ್ರಮಗಳ ಕುರಿತಾಗಿ ಶೀಘ್ರವೇ ಜಿಲ್ಲಾ ಪಂಚಾಯಿತಿಗೆ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.
2023 -24ನೇ ಸಾಲಿನಲ್ಲಿ ಎಸ್‌ಎಸ್‌ಎಲ್ ಸಿ ಫಲಿತಾಂಶ ಕಳೆದ ಬಾರಿಗಿಂತ ಶೇಕಡ 10.49 ರಷ್ಟು ಕುಸಿತವಾಗಿದೆ. ಅನೇಕ ಜಿಲ್ಲೆಗಳು ಎಸ್‌ಎಸ್‌ಎಲ್ಸಿ ಫಲಿತಾಂಶದಲ್ಲಿ ಸುಧಾರಣೆ ಕಂಡಿವೆ. 2023ರ ಎಸ್‌ಎಸ್‌ಎಲ್ ಸಿ ಫಲಿತಾಂಶ ದಲ್ಲಿ ಅಗ್ರಸ್ಥಾನಗಳಲ್ಲಿದ್ದ ಜಿಲ್ಲೆಗಳು ಈ ಬಾರಿ ಕುಸಿತ ಕಂಡಿವೆ.
ಅತ್ಯಂತ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿ ರುವ ಪ್ರೌಢಶಾಲೆಗಳ ಶಿಕ್ಷಕರ ಒಂದು ವಾರ್ಷಿಕ ಬಡ್ತಿ ತಡೆ ಹಿಡಿಯಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..