ಬೆಂಗಳೂರು –
ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಬಂಧನದ ಬೆನ್ನಲ್ಲೇ ರಾಜ್ಯ ಸರ್ಕಾರ ನೇಮಕಾತಿ ಪ್ರಕ್ರಿಯೆ ಯನ್ನು ರದ್ದು ಮಾಡಿ ಆದೇಶವನ್ನು ಹೊರಡಿಸಿದೆ ಹೌದು ಕಿಂಗ್ಪಿನ್ ದಿವ್ಯಾ ಹಾಗರಗಿ ಬಂಧನದ ಬೆನ್ನಲ್ಲೇ ಪಿಎಸ್ಐ ನೇಮಕಾತಿಯನ್ನು ರದ್ದುಗೊಳಿಸಿ ರಾಜ್ಯ ಸರಕಾರದಿಂದ ಮಹತ್ವದ ನಿರ್ಧಾರ ಮಾಡಲಾಗಿದೆ.
ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ,ಮರು ಪರೀಕ್ಷೆ ನಡೆಸಲಾಗುವುದು ಎಂದು ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.ಅಧಿಕಾರಿಗಳು, ರಾಜಕಾರ ಣಿಗಳು ಯಾರೇ ಇರಲಿ ಎಷ್ಟೇ ಪ್ರಭಾವಿಗಳು ಇದ್ದರೂ ಕಠಿಣ ಕ್ರಮ ತೆಗೆದುಕೊಳ್ತೀವಿ.ಅವರನ್ನು ಹೆಡೆಮುರಿ ಕಟ್ತೀವಿ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. 54289 ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ ಇದ್ದ ಆಪಾದಿತರನ್ನು ಬಿಟ್ಟು,ಉಳಿದವರಿಗೆ ಮರು ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ಹೇಳಿದರು.