ಬೆಂಗಳೂರು –
ವೇತನ ಹೆಚ್ಚಳದ ಬೆನ್ನಲ್ಲೇ ಹಳೆಯ ಪಿಂಚಣಿ ಯೋಜನೆಗೆ ಸಮಿತಿ ರಚಿಸಿದೆ ರಾಜ್ಯ ಸರ್ಕಾರ ಹೌದು ಇದಕ್ಕೊಂದು ಸಮಿತಿ ರಚಿಸಿದ ರಾಜ್ಯ ಸರ್ಕಾರದಿಂದ ಅಧಿಕೃತ ವಾಗಿ ಹೊರಬಿತ್ತು ಆದೇಶ ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ
ರಾಜ್ಯ ಸರ್ಕಾರವು ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಆದೇಶ ಹೊರಡಿ ಸಿದೆ.
ರಾಜ್ಯದಲ್ಲಿ ದಿನಾಂಕ:01.04.2006 ರ ನಂತರ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ.ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ದಿನಾಂಕ 21.02.2023 ಮನವಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಜಾರಿಯಲಿರುವ ಸರ್ಕಾರಿ ನೌಕರರ ನೂತನ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ದೇಶದ ಹಲವು ರಾಜ್ಯಗಳು
ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಈ ಹಿಂದೆ ಜಾರಿಯಲ್ಲಿದ್ದ ಹಳೆಯ ಪಿಂಚಣಿ ಯೋಜ ನೆಯನ್ನು ಅನುಷ್ಠಾನಗೊಳಿಸಿರುತ್ತವೆ ಅದೇ ರೀತಿ ಕರ್ನಾಟಕ ರಾಜ್ಯದಲ್ಲೂ ಸಹ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವಂತೆ ಸರ್ಕಾರವನ್ನು ಕೋರಿರುತ್ತಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಯನ್ನು ಪರಿಶೀಲಿಸಿದ ಸರ್ಕಾರವು ಈಗಾಗಲೇ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸುತ್ತದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..






















