ಬೆಂಗಳೂರು –
OPS ನಿರೀಕ್ಷೆಯಲ್ಲಿದ್ದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಹೊರಬಿತ್ತು ರಾಜ್ಯ ಸರ್ಕಾರದಿಂದ ಅಧಿಕೃತವಾದ ಆದೇಶ ಹೌದು
ಹಳೆಯ ಪಿಂಚಣಿ ಯೋಜನೆಯ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಕೊನೆಗೂ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಈ ಒಂದು ಯೋಜನೆಯನ್ನು ಒಳಪಡಿಸಲು ರಾಜ್ಯ ಸರ್ಕಾರದ ಆದೇಶವನ್ನು ಮಾಡಿದೆ.1.4.2006 ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆಯಾಗಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರಿ ಸೇವೆಗೆ ಸೇರಿದ ನೌಕರರನ್ನು ಹಳೆಯ ಪಿಂಚಣಿ ಯೋಜ ನೆಗೆ ಒಳಪಡಿಸಲು ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.
ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿ ಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳ ಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಳಕಂಡ ಷರತ್ತು ಗಳಿಗೊಳಪಟ್ಟು.
ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಸ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸ ಬಹುದು ಎಂದು ಒಪ್ಪಿಗೆ ನೀಡಿದೆ.ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜ ನೆಗೊಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತ ವನ್ನು ನಿಗಧಿತ ನಮೂನೆಯಲ್ಲಿ ದಿನಾಂಕ: 20.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ,ನೇರವಾಗಿ ಸಲ್ಲಿಸತಕ್ಕದ್ದು,
ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾ ಶವಿರುತ್ತದೆ ಒಂದು ಬಾರಿ ಮಾಡಿಕೊಂಡ ಆಯ್ಕೆ ಯನ್ನು ಬದಲಾಯಿಸಲು ಅವಕಾಶವಿಲ್ಲ ಎಂದು ಷರತ್ತು ವಿಧಿಸಲಾಗಿದೆ.ಆಯ್ಕೆಯನ್ನು ಚಲಾ ಯಿಸಲು ಅರ್ಹ ಸರ್ಕಾರಿ ನೌಕರರು ನಿಗಧಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾ ಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ.
ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ಸ್ ಯೋಜನೆಗೊಳಪಡಲು ನಿಗದಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ 31.07.2024 ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜ ನೆಗೊಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಮರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು ಎಂದು ತಿಳಿಸಲಾಗಿದ್ದು
ಇನ್ನೂ ಪ್ರಮುಖವಾಗಿ ಇನ್ನೂಳಿದಂತೆ ಇನ್ನೊಂದು ಹಂತದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೆ ತರುವ ವಿಚಾರ ಕುರಿತಂತೆ ನೌಕರರು ಬೇಡಿಕೆ ಯನ್ನು ಇಟ್ಟಿದ್ದು ಏನೇನಾಗುತ್ತದೆ ಎಂಬೊದನ್ನು ಕಾದು ನೋಡಬೇಕಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..