ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ – ಅಸಮಾಧಾನ ಬೆನ್ನಲ್ಲೇ ಸಿಹಿ ಸುದ್ದಿ

Suddi Sante Desk

ಬೆಂಗಳೂರು –

ಪಠ್ಯಪುಸ್ತಕ ವಿಚಾರದಲ್ಲಿ ರಾಜ್ಯ ಸರ್ಕಾರ ಕೊನೆಗೂ ಎಚ್ಚೇತ್ತುಕೊಂಡಿದೆ.ಹೈಕೊರ್ಟ್ ಅಸಮಾಧಾನ ವನ್ನು ವ್ಯಕ್ತಪಡಿಸಿದ ಬೆನ್ನಲ್ಲೇ ಈ ಕುರಿತಂತೆ ರಾಜ್ಯ ಸರ್ಕಾರ ಸ್ಪಂದಿಸಿ 20 ದಿನಗಳಲ್ಲಿ ಸಂಪೂರ್ಣವಾಗಿ ವಿತರಣೆ ಮಾಡೊದಾಗಿ ನ್ಯಾಯಾಲಯಕ್ಕೆ ಹೇಳಿದೆ.

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಶೇಕಡ 54.74 ರಷ್ಟು ಪಠ್ಯಪುಸ್ತಕ ಪೂರೈಕೆ ಮಾಡಲಾಗಿದ್ದು ಪುಸ್ತಕಗಳ ಮುದ್ರಣ ಕಾರ್ಯ ಪ್ರಗತಿಯಲ್ಲಿದೆ. ಇನ್ನು 20 ದಿನಗಳ ಒಳಗೆ ಮಕ್ಕಳಿಗೆ ಪಠ್ಯ ಪುಸ್ತಕ ಪೂರೈಕೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಹೈಕೋರ್ಟ್ ಗೆ ರಾಜ್ಯ ಸರ್ಕಾರದಿಂದ ಈ ಕುರಿತಾಗಿ ಮಾಹಿತಿ ಸಲ್ಲಿಸಲಾಗಿದೆ. ಈ ಕುರಿತಂತೆ ಸಲ್ಲಿಕೆಯಾ ಗಿದ್ದ ವಿಚಾರಣೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ದಲ್ಲಿ ನಡೆದಿದ್ದು,ಸರ್ಕಾರಿ ಪರ ವಕೀಲರು ಪ್ರಮಾಣ ಪತ್ರ ಸಲ್ಲಿಸಿ ಪಠ್ಯಪುಸ್ತಕ ಮುದ್ರಣ ಕಾರ್ಯ ನಡೆ ಯುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನು 20 ದಿನಗಳಲ್ಲಿ ಸಂಪೂರ್ಣವಾಗಿ ಪಠ್ಯಪುಸ್ತಕ ಪೂರೈಕೆ ಮಾಡಬೇಕು ಎಂದು ಹೈಕೋರ್ಟ್ ಆದೇಶಿಸಿ ವಿಚಾರಣೆ ಮುಂದೂಡಿದೆ. ಪಠ್ಯಪುಸ್ತಕ ಗಳು ಇಲ್ಲದೆ ಶಾಲೆಗಳನ್ನು ಆರಂಭಿಸಿರುವುದು ಅರ್ಥಹೀನ ಎಂದು ಹೈಕೋರ್ಟ್ ಕಳೆದ ವಿಚಾರಣೆ ಸಂದರ್ಭದಲ್ಲಿ ಅಸಮಾಧಾನ ವ್ಯಕ್ತಪಡಿಸಿತ್ತು

ಇದರ ಬೆನ್ನಲ್ಲೇ ಈಗ ಪಠ್ಯಪುಸ್ತಕ ವಿಚಾರ ಕುರಿತಂತೆ ಸ್ಪಂದಿ ಸಿದ್ದು 20 ದಿನಗಳಲ್ಲಿ ಸಂಪೂರ್ಣವಾಗಿ ವಿತರಣೆ ಮಾಡೊದಾಗಿ ಹೇಳಿದ್ದು ಮುಂದೇನಾಗು ತ್ತದೆ ಎಂಬುದನ್ನು ಕಾದು ನೋಡಬೇಕು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.