This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Sports News

ಸ್ಥಳೀಯ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ ವೇತನ ಪರಿಷ್ಕರಣೆ ಮಾಡಿ ಆದೇಶ ಮಾಡಿದ ಸರ್ಕಾರ…..


ಬೆಂಗಳೂರು –

ರಾಜ್ಯದಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾ ಯತ್ ರಾಜ್ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರ ರಿಗೆ ಸರ್ಕಾರ ಕನಿಷ್ಠ ವೇತನವನ್ನು ಜಾರಿಗೊಳಿಸುತ್ತಿದೆ. ಹೀಗಾಗಿ ವೇತನದಲ್ಲಿ ಭಾರಿ ಹೆಚ್ಚಳವಾಗಲಿದ್ದು ಆ ವೇತನ ಪರಿಷ್ಕರಣೆಯಂತೆ ವೇತನ ಸಿಗಲಿದೆ.ಈ ಮೂಲಕ ಭರ್ಜರಿ ಸಿಹಿ ಸುದ್ದಿ ಸದ್ಯದಲ್ಲೇ ಸಿಗಲಿದೆ.

ಈ ಸಂಬಂಧ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ವಿಭಾಗದ ಪೀಠಾಧಿಕಾರಿಗಳು ಅಧಿಸೂಚನೆಯನ್ನು ಹೊರಡಿಸಿದ್ದಾರೆ.ಈ ಅಧಿಸೂಚನೆಯಂತೆ ರಾಜ್ಯಾಧ್ಯಂತ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಉದ್ಯೋಗ ಉದ್ದಿಮೆಯಲ್ಲಿ ಯಾವುದೇ ಕೆಲಸದಲ್ಲಿ ತೊಡಗಿರುವ ಕಾರ್ಮಿಕರಿಗೆ ಕನಿಷ್ಠ ವೇತನ ಕೋಷ್ಟಕದಲ್ಲಿ ನಿರ್ದಿಷ್ಟ ಪಡಿಸಿರುವಂತ ಕನಿಷ್ಠ ವೇತನ ದರ ಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರದ ಕರಡು ಪ್ರಸ್ತಾವ ನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ.

ಈ ಕರಡು ಅಧಿಸೂಚನೆಗೆ ಸಲಹೆ ಆಕ್ಷೇಪಣೆಗಳು ಕರಡು ಪ್ರಸ್ತಾವನೆಯನ್ನು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಮುಂದೆ ಮಂಡಿಸಲಾಗಿತ್ತು.

ಈ ಹಿಂದಿನ ಎಲ್ಲಾ ಅಧಿಸೂಚನೆಗಳನ್ನು ರದ್ದುಪಡಿಸಿ, ಕರ್ನಾಟಕ ರಾಜ್ಯಾಧ್ಯಂತ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಉದ್ಯೋಗ ಉದ್ದಿಮೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಈ ಅಧಿ ಸೂಚನೆ ಹೊರಡಿಸಿದ ದಿನಾಂಕದಿಂದಅನ್ವಯವಾಗುವಂತೆ ಕನಿಷ್ಠ ವೇತನವನ್ನು ಪರಿಷ್ಕರಿಸಲಾಗಿದೆ.


Google News Join The Telegram Join The WhatsApp

 

Suddi Sante Desk

Leave a Reply