ವರ ಮಹಾಲಕ್ಷ್ಮಿ ದಿನದಂದು ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ

Suddi Sante Desk

ಬೆಂಗಳೂರು –

ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಮತ್ತೊಂ ದು ಸಿಹಿ ಸುದ್ದಿಯೊಂದನ್ನು ನೀಡಿದೆ.ಹೌದು ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂ ಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ರೂಪಿಸುವ ಬಗ್ಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗೆ ರಾಜ್ಯ ಸರ್ಕಾರ ಆದೇಶ ನೀಡಿದೆ.

ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963ರ ಅನ್ವಯ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರು ಸರ್ಕಾರಿ ಆಸ್ಪತ್ರೆ ಹಾಗೂ ಸರ್ಕಾರದ ಮಾನ್ಯತೆ ಹೊಂದಿದ ಖಾಸಗಿ ಆಸ್ಪತ್ರೆ ಗಳಲ್ಲಿ ಪಡೆದ ವೈದ್ಯಕೀಯ ಚಿಕಿತ್ಸೆಯ ವೆಚ್ಚದ ಮರುಪಾವತಿಯನ್ನು CGHS ದರ ಪಟ್ಟಿಯನ್ವಯ ಆಯಾ ಇಲಾಖೆ ಹಂತದಲ್ಲಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದೆ.

ಈ ಯೋಜನೆಯಡಿ ಹೃದ್ರೋಗ,ಕ್ಯಾನ್ಸರ್, ನ್ಯೂರೋ ಸರ್ಜರಿ,ಸುಟ್ಟ ಗಾಯ,ಗಂಭೀರ ಗಾಯಗಳು,ಪೀಡಿಯಾಟ್ರಿಕ್,ನವಜಾತ ಶಿಶುಗಳ ಶಸ್ತ್ರಚಿಕಿತ್ಸೆ ಸೇರಿದಂತೆ 7 ಮಾರಣಾಂತಿಕ ಕಾಯಿಲೆ ಗಳನ್ನು ಗುರುತಿಸಲಾಗಿದೆ.ಈ ಕಾಯಿಲೆಗಳಿಗೆ ಸರ್ಕಾರಿ ನೌಕರರು, ಕುಟುಂಬ ಸದಸ್ಯರು ಜ್ಯೋತಿ ಸಂಜೀವಿನಿ ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತ ವಾಗಿ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಈ ಹೊಸ ಯೋಜನೆ ಅನುಷ್ಠಾನಗೊಳಿಸುವ ಪೂರ್ವದಲ್ಲಿ ಈ ಯೋಜನೆಯ ಕಾರ್ಯ ಸ್ವರೂಪ ಯೋಜನಾ ವೆಚ್ಚ ಆಯವ್ಯಯ,ವೈದ್ಯಕೀಯ ಚಿಕಿತ್ಸಾ ವಿಧಾನ, ಚಿಕಿತ್ಸಾ ದರಗಳು, ಫಲಾನುಭವಿ ಗಳು, ಖಾಸಗಿ ವೈದ್ಯಕೀಯ ಆಸ್ಪತ್ರೆಗಳು, ಅವುಗ ಳೊಂದಿಗೆ ಮಾಡಿಕೊಳ್ಳಬೇಕಾದ ಒಡಂಬಡಿಕೆ, ಯೋಜನೆಗೆ ಅಗತ್ಯವಿರುವ ತಂತ್ರಜ್ಞಾನದ ಅಭಿವೃದ್ಧಿ ಮತ್ತಿತರೆ ಅಂಶಗಳ ಬಗ್ಗೆ ವಿಸ್ಕೃತ ಯೋಜನಾ ವರದಿ ಸಿದ್ಧಪಡಿ ಸುವುದು ಅತ್ಯಗತ್ಯ ಎಂದು ಸರ್ಕಾರ ಹೇಳಿದೆ.

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಯೋಜನಾ ವರದಿಯನ್ನು ಎರಡು ತಿಂಗಳ ಒಳಗಾಗಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲು ಕಾರ್ಯಕಾರಿ ನಿರ್ದೇಶಕರು,ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಕಾರಿ ನಿರ್ದೇಶಕರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶಿಸಿದೆ.

ರಾಜ್ಯ ಸರ್ಕಾರವು 2020-21 ಹಾಗೂ 2021-22ನೇ ಸಾಲಿನ ಆಯವ್ಯಯದಲ್ಲಿ,ರಾಜ್ಯ ಸರ್ಕಾರಿ ನೌಕರ ರಿಗೆ ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯ ರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸಲು ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾ ನಗೊಳಿಸುವುದಾಗಿ ಘೋಷಿಸಿತ್ತು ಈಗ ಕೊನೆಗೂ ಆದೇಶ ಮಾಡಿ ನೌಕರರಿಗೆ ಹಬ್ಬದ ದಿನದಂದು ಸಂತೋಷದ ಸುದ್ದಿಯನ್ನು ನೀಡಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.