ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದೆ. ಹೌದು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ 5 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ರಾಜ್ಯದ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತೆ ಯನ್ನು ಬಡ್ತಿ,ಮುಂಬಡ್ತಿಗಾಗಿ ಪಾಸ್ ಮಾಡುವು ದನ್ನು ಕಡ್ಡಾಯಗೊಳಿಸಲಾಗಿತ್ತು.
ಈ ಪರೀಕ್ಷೆಯಲ್ಲಿ ಡಿಸೆಂಬರ್ 31,2022ರೊಳಗೆ ಮುಕ್ತಾಯಗೊಳಿಸುವುದಕ್ಕೆ ಸೂಚಿಸಲಾಗಿತ್ತು. ನಂತರ ಈ ಅವಧಿಯನ್ನು ಡಿ.31, 2023ರವರೆಗೆ ವಿಸ್ತರಿಸಲಾಗಿತ್ತು.ಇದೀಗ ರಾಜ್ಯ ಸರ್ಕಾರ ಇದರೊಂದಿಗೆ ನೌಕರರಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು ದಿನಾಂಕ: 17.04. 2021 ರೊಳಗೆ ಸದರಿ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಿರುವ ಅರ್ಹ ಸೇವಾನಿರತ ಸರ್ಕಾರಿ ನೌಕರರು ಹಾಜರುಪಡಿಸುವ ಡಿಜಿಟಲ್ ಸಹಿ ಹೊಂದಿರುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ಪುಮಾಣ ಪತ್ರವನ್ನು ಪರಿಶೀಲಿಸಿ ಉತ್ತೀರ್ಣ ರಾದ ದಿನಾಂಕವನ್ನು ಖಚಿತಪಡಿಸಿಕೊಂಡು ಪ್ರೋತ್ಸಾಹ ಧನ ಮಂಜೂರು ಮಾಡಲು ಕ್ರಮಕೈಗೊಳ್ಳುವಂತೆ ಪ್ರಾಧಿಕಾರಗಳಿಗೆ ಈ ಮೂಲಕ ಸರ್ಕಾರ ಆದೇಶಿಸಿದೆ.
ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012ರ ಅನ್ವಯ ದಿನಾಂಕ 17:04:2021 ರೊಳಗೆ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಸೇವಾ ನಿರತ ನೌಕರರಿಗೆ ಈ ಪ್ರೋತ್ಸಾಹ ಧನ ಸಿಗಲಿದೆ.ಈ ಪರೀಕ್ಷೆ ಬರೆಯಲು 2.55 ಲಕ್ಷಕ್ಕೂ ಹೆಚ್ಚು ಜನ ನೌಕರರು ನೊಂದಣಿ ಮಾಡಿಕೊಂಡಿದ್ದರೂ,1.5 ಲಕ್ಷ ನೌಕರರಿಮಾತ್ರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..