This is the title of the web page
This is the title of the web page

Live Stream

March 2023
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ವರ್ಗಾವಣೆ ನಿರೀಕ್ಷೆ ಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ ಶಿಕ್ಷಕರ ವರ್ಗಾವಣೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿ ಆದೇಶ


ಬೆಂಗಳೂರು

ವರ್ಗಾವಣೆ ಯ ನಿರೀಕ್ಷೆ ಯಲ್ಲಿರುವ ರಾಜ್ಯದ ಶಿಕ್ಷಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ ಹೌದು ಶಿಕ್ಷಕರ ವರ್ಗಾವಣೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿತ್ತು ಆದರೆ ಈಗ ಸರ್ಕಾರ ಈ ದಿನಾಂಕವನ್ನು ಮಾರ್ಚ್​ ನಾಲ್ಕರ ವರೆಗೆ ಮುಂದೂಡಿ ಆದೇಶ ಹೊರಡಿಸಿದೆ.

2022-23ನೇ ಸಾಲಿನ ಸರ್ಕಾರಿ ಪಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಾಲಾ ಶಿಕ್ಷಕರು ತತ್ಸಮಾನ ವೃಂದದ ಶಿಕ್ಷಕರಗಳು ಹೆಚ್ಚು ವರಿ ಶಿಕ್ಷಕರ ಮರುಹೊಂದಾಣಿಕೆ ಕ್ರಮಗಳ ಮುಂದುವರಿಕೆ ಮತ್ತು ವರ್ಗಾವಣೆಗೆ ಅರ್ಜಿಸಲ್ಲಿ ಸುವ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿ ಆದೇಶ ಹೊರಡಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರ ಅಧಿ ಸೂಚನೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 (2020ರ ಕರ್ನಾಟಕ ಆದಿನಿಯಮ ಸಂಖ್ಯೆ14) ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು- 2020ರ ನಿಯಮ ಗಳಂತೆ ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮ-2022ರ ಪ್ರಕಾರ ಉಲ್ಲೇಖಿತ 1ರಲ್ಲಿ ಈಗಾಗಲೇ ಮಾರ್ಗಸೂಚಿ ಸಹಿತ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸ ಲಾಗಿತ್ತು.

ಕೆಲವು ತಾಂತ್ರಿಕ ಮತ್ತು ಆಡಳಿತಾತ್ಮಕ ಕಾರಣ ಗಳಿಂದಾಗಿ ಹೆಚ್ಚುವರಿ ಶಿಕ್ಷಕರ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂ ಡಲಾಗಿತ್ತು.ಶಿಕ್ಷಕರುಗಳು, ಕ್ಷೇತ್ರಶಿಕ್ಷಣಾ ಧಿಕಾರಿ ಗಳು ಸೇವಾ ಮಾಹಿತಿಯನ್ನು ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ನಿಗದಿತ ಕಾಲಾವಕಾಶದೊಳಗೆ ಆಗಿರುವ ಲೋಪದಿಂದಾಗಿ ಸಮಸ್ಯೆ ಉದ್ಭವವಾ ಗಿರುತ್ತದೆ.ಪ್ರಸ್ತುತ ಸಮಸ್ಯೆಯನ್ನು ಇತ್ಯರ್ಥಪಡಿಸಿ ಹೆಚ್ಚುವರಿ ಪ್ರಕ್ರಿಯೆಯನ್ನು ಮುಂದುವರೆಸಲು ಕ್ರಮ ಕೈಗೊಳ್ಳಲಾಗುವುದು.ಆದ್ದರಿಂದ ಕೆಳಕಂ ಡಂತೆ ದಿನಾಂಕಗಳನ್ನು ಮರು ನಿಗದಿಪಡಿ ಸಲಾಗಿದೆ.ಶಿಕ್ಷಕರ ವರ್ಗಾವಣೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿ ಸರ್ಕಾರ ಆದೇಶವನ್ನು ಮಾಡಿದೆ.

ರಾಜ್ಯದ ಎಲ್ಲಾ ಶಿಕ್ಷಕರು ಮತ್ತು ಸಕ್ಷಮ ವರ್ಗಾವಣಾ ಪ್ರಾಧಿಕಾರಿಗಳು ಹಾಗೂ ಅನುಷ್ಟಾನಾಧಿಕಾರಿಗಳು ಈ ಪತ್ರದೊಂದಿಗೆ ನೀಡಲಾಗಿರುವ ಸೂಚನೆ/ ಮಾರ್ಗಸೂಚಿ ಅಂಶಗಳನ್ನು ಕಡ್ಡಾಯವಾಗಿ ಓದಿಕೊಳ್ಳತಕ್ಕದ್ದು, ಅದರಂತೆ ಕಾರ್ಯ ನಿರ್ವಹಿಸಲು ತಿಳಿಸಿದೆ. ಪ್ರಸಕ್ತ ಸಾಲಿನ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆ ಗಳು ಸ್ಥಗಿತಗೊಂಡಿರುವುದಿಲ್ಲ ಮುಂದುವರೆ ಯುತ್ತದೆ. ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: 30/01/2023ರವರೆಗೆ ನಿಗಧಿಪಡಿಸಲಾಗಿತ್ತು, ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಅಂತಿಮವಾಗಿ ದಿನಾಂಕ: 04/03/2022 ರವರೆಗೆ ವಿಸ್ತರಿಸಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News Join The Telegram Join The WhatsApp

 

 

Suddi Sante Desk

Leave a Reply