ಬೆಂಗಳೂರು –
ಶಿಕ್ಷಕರಾಗಬೇಕು ಎಂದುಕೊಂಡು ಕಾಯುತ್ತಿದ್ದ ವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ ಹೌದು 2022-23ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ 750 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಅನುಮತಿ ನೀಡಿದೆ.
ಈ ಮೂಲಕ ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣಲಾಖೆಯ ನಿರ್ದೇಶಕರು ಆದೇಶ ಹೊರ ಡಿಸಿದ್ದಾರೆ.ಈಗಾಗಲೇ 5159 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿರುವುದಾಗಿ ತಿಳಿಸಿದ್ದಾರೆ.ಇನ್ನೂ ಕೆಲ ಜಿಲ್ಲೆ ಗಳಲ್ಲಿ ಇರುವಂತ ಖಾಲಿ ಹುದ್ದೆಗಳಿಗೆ ಅತಿಥಿ ಶಿಕ್ಷಕರ ಬೇಡಿಕೆಯನ್ನು ಸಲ್ಲಿಸಲಾಗಿದೆ. ದಿನಾಂಕ 16-12-2022ರಂದು ಇದ್ದಂತೆ ಈಗಾಗಲೇ ಹಂಚಿಕೆ ಮಾಡಿರುವ ಅತಿಥಿ ಶಿಕ್ಷಕರ ಹುದ್ದೆಗಳನ್ನು ಹೊರತುಪಡಿಸಿ ಒಟ್ಟು 3646 ಹುದ್ದೆಗಳು ಖಾಲಿ ಇರುತ್ತವೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..






















