This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ – 750 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

WhatsApp Group Join Now
Telegram Group Join Now

ಬೆಂಗಳೂರು

ಶಿಕ್ಷಕರಾಗಬೇಕು ಎಂದುಕೊಂಡು ಕಾಯುತ್ತಿದ್ದ ವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ ಹೌದು 2022-23ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ 750 ಅತಿಥಿ ಶಿಕ್ಷಕರನ್ನು  ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಅನುಮತಿ ನೀಡಿದೆ.

ಈ ಮೂಲಕ ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣಲಾಖೆಯ ನಿರ್ದೇಶಕರು ಆದೇಶ ಹೊರ ಡಿಸಿದ್ದಾರೆ.ಈಗಾಗಲೇ 5159 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿರುವುದಾಗಿ ತಿಳಿಸಿದ್ದಾರೆ.ಇನ್ನೂ ಕೆಲ ಜಿಲ್ಲೆ ಗಳಲ್ಲಿ ಇರುವಂತ ಖಾಲಿ ಹುದ್ದೆಗಳಿಗೆ ಅತಿಥಿ ಶಿಕ್ಷಕರ ಬೇಡಿಕೆಯನ್ನು ಸಲ್ಲಿಸಲಾಗಿದೆ. ದಿನಾಂಕ 16-12-2022ರಂದು ಇದ್ದಂತೆ ಈಗಾಗಲೇ ಹಂಚಿಕೆ ಮಾಡಿರುವ ಅತಿಥಿ ಶಿಕ್ಷಕರ ಹುದ್ದೆಗಳನ್ನು ಹೊರತುಪಡಿಸಿ ಒಟ್ಟು 3646 ಹುದ್ದೆಗಳು ಖಾಲಿ ಇರುತ್ತವೆ.

ಈ ಹುದ್ದೆಗಳ ಸಂಖ್ಯೆಗೆ ಒಟ್ಟು 750 ಶಿಕ್ಷಕರನ್ನು ಸರ್ಕಾರವು ಒದಗಿಸಿರುವುದರಿಂದ ಆಯಾ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಅನು ಪಾತದಂತೆ ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗಿದೆ ಎಂದಿದ್ದಾರೆ.ಈ ಎಲ್ಲಾ ಅಂಶಗಳ ಹಿನ್ನಲೆಯಲ್ಲಿ ಹೆಚ್ಚುವರಿಯಾಗಿ 750 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರವು ಸಹಮತಿ ನೀಡಿದೆ. ಕೆಲ ಷರತ್ತುಗಳನ್ನು ಒಳಗೊಂಡು, ಅತಿಥಿ ಶಿಕ್ಷಕರನ್ನು ಹಂಚಿಕೆ ಮಾಡಿ ಅನುಮತಿ ನೀಡಲಾಗಿರುತ್ತದೆ ಎಂದಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk