ರಾಜ್ಯದ ಸರ್ಕಾರಿ ನೌಕರರಿಗೆ ಎಚ್ಚರಿಕೆ ಸಂದೇಶ ನೀಡಿದ ರಾಜ್ಯ ಸರ್ಕಾರ – ರಾತ್ರೋರಾತ್ರಿ ಮಾಡಿದ ಎಡವಟ್ಟಿನಿಂದ ನೌಕರರ ಮೇಲೆ ಶಿಸ್ತು ಕ್ರಮಕ್ಕೆ ಸೂಚನೆ ಕನ್ನಡ ಲೋಪದೋಷವಾದರೆ ಶಿಕ್ಷೆ…..

Suddi Sante Desk

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರೇ ಎಚ್ಚರ ಸರ್ಕಾರದ ಆದೇಶಗಳು ಅಥವಾ ಸುತ್ತೋಲೆಗಳನ್ನು ಕನ್ನಡದಲ್ಲಿ ರಚಿಸುವಾಗ ತಪ್ಪು ತಪ್ಪಾಗಿ ಟೈಪಿಂಗ್ ಅಥವಾ ವ್ಯಾಕರಣದಲ್ಲಿ ದೋಷವಾದರೆ ಸಂಬಳದಲ್ಲಿ ಕಡಿತವಾಗಲಿದೆ ಮುಂಬಡ್ತಿ ಕೂಡಾ ನಿರಾಕರಿ ಸಲಾಗುತ್ತದೆ.ಈ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಶಿಫಾರಸು ಮಾಡಿದೆ.ಎರಡು ದಿನಗಳ ಹಿಂದೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ- ವಿಡಿಯೋ ಮಾಡದಂತೆ ಆದೇಶ ಹೊರಡಿಸಿತ್ತು.ಆದರೆ ಅದಕ್ಕೆ ತೀವ್ರ ಟೀಕೆಗಳು ವ್ಯಕ್ತವಾದ ನಂತರ ಅದನ್ನು ಹಿಂಪಡೆದು ಸರ್ಕಾರ ಹೊರಡಿಸಿದ ಹೊಸ ಆದೇಶದಲ್ಲಿ ಕರ್ನಾಟಕ ಸೇರಿದಂತೆ ಹಲವು ಪದಗಳಲ್ಲಿ ವ್ಯಾಕರಣ ದೋಷಗಳು ಕಂಡು ಬಂದಿದ್ದವು.ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಇದನ್ನು ಗಂಭೀರವಾಗಿ ಪರಿಗಣಿಸಿ ಅಧಿಸೂಚನೆ ಹೊರಡಿಸುವ ಟೈಫಿಂಗ್ ಮಾಡುವ ಅಧಿಕಾ ರಿಗಳು ಭಾಷೆಯನ್ನು ಗಂಭೀರವಾಗಿ ತೆಗೆದುಕೊಳ್ಳದ ಕಾರಣ ಈ ಪ್ರಮಾದ ಆಗಿದ್ದು ಈ ಒಂದು ಕುರಿತು ಹೊಸದೊಂದು ಪ್ರಯೋಗಕ್ಕೆ ಮುಂದಾಗಿದ್ದೇವೆ ಎಂದರು

ಕೆಲವು ವೇಳೆ ಇಂಗ್ಲೀಷ್ ನಲ್ಲಿ ಆದೇಶ ಅಥವಾ ಸುತ್ತೋಲೆ ರಚಿಸುವಾಗ ಅಥವಾ ಗೂಗಲ್ ಟ್ರಾನ್ಸ್ ಲೇಟ್ ನೆರವು ಪಡೆಯುತ್ತಿರುವುದರಿಂದಲೂ ಈ ರೀತಿಯ ತಪ್ಪುಗಳು ಆಗುತ್ತಿವೆ.ಇದನ್ನು ಒಪ್ಪಲು ಸಾಧ್ಯವಿಲ್ಲ.ರಾಜ್ಯ ಸರ್ಕಾರ ದೊಂದಿಗೆ ಕೆಲಸ ಮಾಡುವವರು ರಾಜ್ಯದ ಭಾಷೆಯನ್ನು ಬಲ್ಲವರಾಗಿರಬೇಕು ಎಂದಿದ್ದಾರೆ

ಟೈಪಿಂಗ್ ಮಾಡಿದವರು ಸೇರಿದಂತೆ ಆದೇಶದ ಪತ್ರಕ್ಕೆ ಸಹಿ ಮಾಡಿ ಹೊರಡಿಸಿದ ಅಧಿಕಾರಿಗಳ ಹೆಸರನ್ನು ಮುಖ್ಯ. ಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅಧಿಕಾರಿಗಳಿಗೆ ನಾಗಾಭರಣ ಕಳುಹಿಸುತ್ತಿದ್ದಾರೆ.ಸರ್ಕಾರಿ ಆದೇಶ ಅಧಿಸೂ ಚನೆ ಮತ್ತಿತರ ದಾಖಲಾತಿಗಳಲ್ಲಿ ತಪ್ಪುಮಾಡಿದವರ ಹೆಸರನ್ನು ಸರ್ವೀಸ್ ರೆಕಾರ್ಡ್ ನಲ್ಲಿ ಸೇರಿಸಬೇಕು ಈ ರೀತಿ ಆದಾಗ ಅವರ ಸಂಬಳ ಏರಿಕೆ ಮಾಡದೇ ಮುಂಬಡ್ತಿ ಸಿಗಲ್ಲ ಎಂದು ಅವರು ತಿಳಿಸಿದರು.

ಬಹುತೇಕ ಅಧಿಸೂಚನೆ ಅಥವಾ ಸುತ್ತೋಲೆಗಳನ್ನು ಪ್ರಥಮ ಅಥವಾ ದ್ವಿತೀಯ ದರ್ಜೆ ಸಹಾಯಕರಿಂದ ಟೈಪ್ ಮಾಡಿಸಲಾಗುತ್ತದೆ.ಅವರಿಗೆ ಕನ್ನಡ ಭಾಷೆ ಗೊತ್ತಿರುತ್ತದೆ. ಆದರೆ ಕೆಲವು ವೇಳೆ ಅವರು ತಡ ರಾತ್ರಿ ಟೈಪ್ ಮಾಡು ವುದು ಮತ್ತಿತರ ಒತ್ತಡಕ್ಕೆ ಸಿಲುಕಿರುತ್ತಾರೆ.ಆದ್ದರಿಂದ ಓದಲು ತಪ್ಪಿರುವುದನ್ನು ಸರಿಪಡಿಸಲು ಸಾಕಷ್ಟು ಸಮಯ ವಿರುವುದಿಲ್ಲ ಎಂದು ಡಿಪಿಎಆರ್ ಮೂಲಗಳು ತಿಳಿಸಿವೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.