ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಆದೇಶವೊಂದನ್ನು ಹೊರಡಿಸಿದೆ ಹೌದು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯದ ಅವಧಿಯಲ್ಲಿ ಅಧಿಕಾರಿ ಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಧರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿ ಸೂಚನೆ ಯನ್ನು ನೌಕರರಿಗೆ ನೀಡಿದೆ

ಹೌದು ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ ಗಳು,ಸಿಬ್ಬಂದಿಗಳು ತಾವು ಕುಳಿತ ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಹೆಸರು ಮತ್ತು ಹುದ್ದೆ,ಪದನಾಮ ಸೂಚಿ ಸುವ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿ ಸಾರ್ವಜನಿಕ ಸೇವೆಯಲ್ಲಿ ಪಾರದರ್ಶಕತೆಯನ್ನು ತರಲು ಕ್ರಮ ಕೈಗೊಳ್ಳುವಂತೆ ಸರ್ಕಾರದ ಎಲ್ಲಾ ಅವರ ಮುಖ್ಯ ಕಾರ್ಯದರ್ಶಿಗಳು ಪ್ರಧಾನ ಕಾರ್ಯದರ್ಶಿಗಳ ಮತ್ತು ಕಾರ್ಯದರ್ಶಿಗಳು ತಮ್ಮ ಅಧೀನ ಇಲಾಖೆಗಳಿಗೆ ಆದೇಶವನ್ನು ಪಾಲಿಸಲು ನಿರ್ದೇಶನ ನೀಡಲಾಗಿದೆ.
