ಬೆಂಗಳೂರು –
ಪೊಲೀಸ್ ಅಧಿಕಾರಿಗಳು,ಸಿಬ್ಬಂದಿಗಳಿಗೆ ಹೆಲ್ಮೆಟ್ ಕಡ್ಡಾಯ – ಕಡ್ಡಾಯಗೊಳಿಸಿ ಆದೇಶ ಮಾಡಿದ ರಾಜ್ಯ ಸರ್ಕಾರ ಹೌದು
ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಹೆಲ್ಮಟ್ ನ್ನು ಕಡ್ಡಾಯವಾಗಿ ಧರಿಸುವಂತೆ ರಾಜ್ಯ ಸರ್ಕಾರ ಆದೇಶವನ್ನು ಮಾಡಿದೆ.ಹೌದು ಬೆಂಗಳೂರು ನಗರ ಒಳಗೊಂ ಡಂತೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಹೆಲೈಟ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆದ್ದರಿಂದ ಇನ್ನು ಮುಂದೆ ಇಂತಹ ಘಟನೆಗಳನ್ನು ತಪ್ಪಿಸಲು ರಾಜ್ಯಾದ್ಯಂತ ಎಲ್ಲಾ ಘಟಕಗಳಲ್ಲಿ ಬೆಂಗಳೂರು ನಗರ ಒಳಗೊಂಡಂತೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಮೋಟಾರು ವಾಹನ ಕಾಯ್ದೆ ಯಡಿಯಲ್ಲಿ ಕಲಂ 129(ಎ) & (ಬಿ) ರಲ್ಲಿ ನಮೂದಿಸಿರುವಂತೆ ಹಾಗೂ ಸೂಚಿಸಿರುವಂತೆ ಕಡ್ಡಾಯವಾಗಿ ಸುರಕ್ಷಿತ ಹೆಲ್ಮಟ್ ಅನ್ನು ಧರಿಸಿ, ಸದರಿ ಹೆಲ್ಮಟ್ ಅನ್ನು ಭದ್ರವಾಗಿ ಕಟ್ಟಿಕೊಳ್ಳು ವುದು
ಮೋಟಾರು ವಾಹನ ಕಾಯ್ದೆಯ ಕಲಂ 129 (ಎ) & (ಬಿ) ರಡಿಯಲ್ಲಿ ಹೆಲ್ಮಟ್ ನ ನಿರ್ದಿಷ್ಟತೆಯ ಬಗ್ಗೆ ವಿವರಿಸಿದ್ದು ಆ ಪ್ರಕಾರ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಸುರಕ್ಷಿತ ಹೆಲ್ಮಟ್ ಅನ್ನು ಧರಿಸುವಂತ ನಿರ್ದೇಶನಗಳನ್ನು ನೀಡಿ, ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..