ಬೆಂಗಳೂರು –
ಹಣಕಾಸು ಅವ್ಯವಹಾರ ಆರೋಪ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶ.ಹೌದು ಮೈಸೂರು ಜಿಲ್ಲೆಯ ಜಿಲ್ಲಾಧಿಕಾ ರಿಯಾಗಿದ್ದ ಅವಧಿಯಲ್ಲಿ (2018-19ರಲ್ಲಿ) ಹಣಕಾಸು ಅವ್ಯವಹಾರ ಹಾಗೂ ಸುಳ್ಳು ಮಾಹಿತಿ ನೀಡಿದ ಆರೋಪದ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ.
ರೋಹಿಣಿ ಸಿಂಧೂರಿ ಅವರು ನಿಯಮಗಳನ್ನು ಮೀರಿ ಇಲಾಖೆ ಅನುಮತಿ ಪಡೆಯದೆ ದುಡ್ಡು ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತ ಪ್ರಾಥಮಿಕ ತನಿಖೆಯಲ್ಲಿ ಅವರು ಅಸಮರ್ಪಕ ಉತ್ತರ ನೀಡಿದ್ದಾರೆ ಮತ್ತು ಯಾವುದೇ ದಾಖಲೆ ನೀಡಿಲ್ಲ.ಹೀಗಾಗಿ ಅವರ ವಿರುದ್ಧ ಇಲಾಖಾ ತನಿಖೆಗೆ ನಿವೃತ್ತ ಐಎಎಸ್ ಅಧಿಕಾರಿ ಯೋಗೇಂದ್ರ ತ್ರಿಪಾಠಿ, ಬಿಬಿಎಂಪಿ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ನೇತೃತ್ವ ದಲ್ಲಿ ತನಿಖಾ ಸಮಿತಿ ರಚನೆ ಮಾಡಿ ಡಿಪಿಎಆರ್ ಅಧೀನ ಕಾರ್ಯದರ್ಶಿ ಜೇಮ್ಸ್ ಥಾರಖನ್ ಅವರು ಆದೇಶ ಹೊರಡಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..






















