ಬೆಂಗಳೂರು –
ರಾಜ್ಯದಲ್ಲಿ ‘ಹುಕ್ಕಾ ಬಾರ್ ನಿಷೇಧ – ಮಾರಾಟ ಸೇವನೆ ಜಾಹಿರಾತು ನಿಷೇಧ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ ಹೌದು ರಾಜ್ಯದಲ್ಲಿ ನಿಕೋಟಿನ್ ರಹಿತ ತಂಬಾಕು ರಹಿತ, ಸ್ವಾಧ ಭರಿತ, ಸ್ವಾಧರಹಿತ ಹುಕ್ಕ ಮೊಲಾಸಸ್, ಶಿಶಾ ಹಾಗೂ ಇದೇ ಮಾದರಿಯ ಇನ್ನಿತರ ಹೆಸರು ಗಳಿಂದ ಕರೆಯಲ್ಪಡುವ ಹುಕ್ಕಾo ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಸಂಗ್ರಹಣೆ, ವ್ಯಾಪಾರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ (WHO) ನಡೆಸಿರುವ ಗ್ಲೋಬಲ್ ಅಡಲ್ ಟೊಬ್ಯಾಕೊ ಸರ್ವೇ 2016-17 ಅಧ್ಯಯನ ಪ್ರಕಾರ, ಕರ್ನಾಟಕದಲ್ಲಿ 22.8% ವಯಸ್ಕರು (15 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು) ಒಂದಲ್ಲ ಒಂದು ರೀತಿಯ ತಂಬಾಕು ಉತ್ಪನ್ನ ಗಳನ್ನು ಸೇವಿಸುತ್ತಿದ್ದಾರೆ.
ಈ ಪೈಕಿ ಶೇ.8.8 ರಷ್ಟು ಮಂದಿ ಧೂಮಪಾನಿಗ ಳಾಗಿದ್ದಾರೆ. ಕರ್ನಾಟಕದಲ್ಲಿ 23.9% ವಯಸ್ಕರು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಒಳ ಗಾಗುತ್ತಿದ್ದಾರೆ ಎಂದಿದ್ದಾರೆ.ಭಾರತದಲ್ಲಿ ತಂಬಾಕು ಉತ್ಪನ್ನಗಳ ಸೇವನೆ, ಮಾರಾಟ, ಜಾಹೀರಾತು, ಸಂಗ್ರಹಣೆ, ವಾಣಿಜ್ಯ ಮಹಾರ, ಉತ್ಪಾದನೆ, ಹಂಚಿಕೆ ಇವುಗಳನ್ನು ಸಿಗರೇಟ್ ಅಂಡ್ ಟೊಬ್ಯಾಕೋ ಪ್ರಾಡಕ್ಟ್ ಆಕ್ಟ್ (COTPA) 2003 ರಲ್ಲಿ ನಿಯಂತ್ರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ
ಇದನ್ನು ಉಲ್ಲಂಘನೆ ಮಾಡಿದವರ ವಿರುದ್ಧ COTPA 2003, ಕಾಯ ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯಿದ 2015, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ಕರ್ನಾಟಕ ವಿಷ (ಸ್ವಾಧೀನ ಮತ್ತು ಮಾರಾಟ) ನಿಯಮ 2015 ಮತ್ತು ಭಾರತೀಯ ದಂಡಸಂಹಿತ ಮತ್ತು ಅ ನಿಯಂತ್ರಣ ಹಾಗೂ ಅಗ್ನಿ ಸುರಕ್ಷತೆ ಕಾಯಿದ ಪ್ರಕಾರ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..