ಬೆಂಗಳೂರು –
ವಿದ್ಯುತ್ ದರ ಇಳಿಕೆ ಮಾಡಿದ ರಾಜ್ಯ ಸರ್ಕಾರ ದರ ಇಳಿಕೆ ಮಾಡಿದ ಆದೇಶ ಹೊರಡಿಸಿದ KREC ಹೌದು ಹೊಸ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ವಿದ್ಯುತ್ ದರ ಇಳಿಕೆ ಮಾಡಿ ಆದೇಶ ಹೊರಡಿಸಿದೆ.ಆ ಮೂಲಕ ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿದೆ.
100 ಯೂನಿಟ್ ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ.ಅದೇ ರೀತಿಯಾಗಿ ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ. ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್ ಗೆ 40 ಪೈಸೆ ಕಡಿತ ಮಾಡಲಾಗಿದ್ದು, ಖಾಸಗಿ ಏತ ನೀರಾವರಿ ಬಳಕೆ ದಾರರಿಗೆ 2 ರೂಪಾಯಿ ಇಳಿಕೆ ಮಾಡಲಾಗಿದೆ.
100 ಯೂನಿಟ್ ಗಿಂತ ಹೆಚ್ಚು ಬಳಸುವವರಿಗೆ ಮಾತ್ರ ಹೊಸ ದರ ಮಾರ್ಚ್ 1ರಿಂದಲೇ ಅನ್ವಯವಾಗಲಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..