ಬರಪರಿಹಾರಕ್ಕೆ 628 ಕೋಟಿ ರೂಪಾಯಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ – ಕೊನೆಗೂ ಎಚ್ಚೇತ್ತುಕೊಂಡ ರಾಜ್ಯ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ…..

Suddi Sante Desk
ಬರಪರಿಹಾರಕ್ಕೆ 628 ಕೋಟಿ ರೂಪಾಯಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ – ಕೊನೆಗೂ ಎಚ್ಚೇತ್ತುಕೊಂಡ ರಾಜ್ಯ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ…..

ಬೆಂಗಳೂರು

ಬರಪರಿಹಾರಕ್ಕೆ 628 ಕೋಟಿ ರೂಪಾಯಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ – ಕೊನೆಗೂ ಎಚ್ಚೇತ್ತುಕೊಂಡ ರಾಜ್ಯ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ ಹೌದು

ಹೌದು ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರವು ತುರ್ತಾಗಿ 628 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.ಹೌದು ಇದರೊಂದಿಗೆ ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ ಸಿಕ್ಕಂತಾ ಗಿದೆ.ಬರಪರಿಹಾರಕ್ಕೆ ರೂ.628 ಕೋಟಿ ಅನು ದಾನವನ್ನು ಬಿಡುಗಡೆ ಮಾಡಿ ಆದೇಶವನ್ನು ಮಾಡಿದೆ.ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಈ ಮೂಲಕ ಸಿಹಿ ಸುದ್ದಿಯನ್ನು ನೀಡಿದೆ.

628 ಕೋಟಿ ರೂ ಹಣವನ್ನು ಬರಪರಿಹಾರವಾಗಿ ನೇರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತ ನಾಡಿದ ಅವರು ಬರ ನಿರ್ವಹಣೆಗೆ ಪರಿಹಾರ ಕ್ರಮವಾಗಿ 2000 ಕೋಟಿ ರೂ.ಅನುದಾನವನ್ನು ನಿಗದಿ ಪಡಿಸಿದ್ದು ಈಗಾಗಲೇ ರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಲಾಗಿದೆ.1.6 ಲಕ್ಷ ರೈತರ ಬ್ಯಾಂಕ್ ಖಾತೆಯ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಿದ್ದು ಇದು ಸರಿಯಾದ ಕೂಡಲೇ ಅವರ ಖಾತೆಗೆ ಹಣ ಜಮೆ ಆಗಲಿದೆ ಎಂದರು.

ಇನ್ನೂ ರಾಜ್ಯ ಸರ್ಕಾರವು ರಾಜ್ಯದ 223 ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳು ಎಂದು ಘೋಷಿಸಿದ್ದು ಕುಡಿಯುವ ನೀರು, ಮೇವು ಹಾಗೂ ಇತರೆ ಮೂಲಭೂತ ಸಮಸ್ಯೆಗಳ ನಿವಾರಣೆಗೆ, ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಗಳ ಖಾತೆಗಳಿಗೆ ರೂ 870 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಅರ್ಹ ರೈತರಿಗೆ ಬರ ಪರಿಹಾರ ತಲುಪಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ರೈತರ ಹೆಸರು ಪ್ರಕಟಿಣೆ ಮಾಡಲಾಗಿದೆ. ಆ ಪಟ್ಟಿಯಲ್ಲಿ ರೈತರ ಹೆಸರು ಬಿಟ್ಟು ಹೋಗಿದ್ದಲ್ಲಿ, ಅಂತಹ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸ್ಥಳೀಯ ಕಂದಾಯ ಇಲಾಖೆ ಕಚೇರಿಗೆ ಭೇಟಿ ನೀಡಿ, ಹೆಸರು ಸೇರ್ಪಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.