ರಾಜ್ಯದ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಿದ ರಾಜ್ಯ ಸರ್ಕಾರ – ವೇತನ ಶ್ರೇಣಿ ಮೇಲ್ದರ್ಜೆಗೆ ಏರಿಕೆ ಮಾಡಿ ಆದೇಶ

Suddi Sante Desk

ಬೆಂಗಳೂರು –

ರಾಜ್ಯ ಸರ್ಕಾರವು ಸರ್ಕಾರದ ವಿವಿಧ ಇಲಾಖೆಗಳ ನಿರ್ದಿಷ್ಟ ವೃಂದದ ಹುದ್ದೆಗಳ ವೇತನ ಶ್ರೇಣಿಗಳನ್ನು ರಾಜ್ಯ ಸರ್ಕಾರ ಮೇಲ್ದರ್ಜೆಗೇರಿಸಿದೆ.ಅಲ್ಲದೇ 6ನೇ ರಾಜ್ಯ ವೇತನ ಆಯೋಗದ ವರದಿಯ 2ನೇ ಸಂಪುಟದಲ್ಲಿನ ಶಿಫಾರಸ್ಸು ಗಳಂತೆ ಪರಿಷ್ಕರಿಸಿ ಈ ಮೂಲಕ ರಾಜ್ಯದ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ.

ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು 6ನೇ ರಾಜ್ಯ ವೇತನ ಆಯೋಗವು ತನ್ನ ವರದಿಯ 2ನೇ ಸಂಪುಟದಲ್ಲಿ ವಿವಿಧ ಇಲಾಖೆಗಳ ನಿರ್ದಿಷ್ಟ ವೃಂದದ ಹುದ್ದೆಗಳ ವೇತನ ಶ್ರೇಣಿಗಳನ್ನು ಮೇಲ್ದರ್ಜೆಗೇರಿಸುವಂತೆ ಮತ್ತು ನಿರ್ದಿಷ್ಟ ವೃಂದಗಳಿಗೆ ವಿಶೇಷ ಭತ್ಯೆಗಳನ್ನು ಮಂಜೂರು ಮಾಡು ವಂತೆ ಶಿಫಾರಸ್ಸು ಮಾಡಿದೆ

ಈ ಹಿನ್ನಲೆಯಲ್ಲಿ ವಿವಿಧ ಇಲಾಖೆಗಳ ನಿರ್ಧಿಷ್ಟ ವೃಂದದ ಹುದ್ದೆಗಳ ವೇತನ ಶ್ರೇಣಿಗಳನ್ನು ಮೇಲ್ದರ್ಜೆಗೇರಿಸಲಾಗಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳ ಪ್ರಸಕ್ತ ವೇತನ ಶ್ರೇಣಿಯನ್ನು ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರವು ಮಾಡಿದೆ

ಹೀಗಿದೆ ವಿವಿಧ ಇಲಾಖೆಗಳ ನಿರ್ದಿಷ್ಟ ವೃಂದದ ಹುದ್ದೆಗಳ ಪರಿಷ್ಕೃತ ವೇತನ ಶ್ರೇಣಿಯನ್ನು ಹೆಚ್ಚಿಗೆ ಮಾಡಿ ಆದೇಶ ವನ್ನು ಹೊರಡಿಸಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.