ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿ ಪ್ರಯಾಣಿಸಿ – ಶಕ್ತಿ ಯೋಜನೆಯನ್ನು ಸರಳಗೊಳಿಸಿದ ರಾಜ್ಯ ಸರ್ಕಾರ…..

Suddi Sante Desk
ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿ ಪ್ರಯಾಣಿಸಿ – ಶಕ್ತಿ ಯೋಜನೆಯನ್ನು ಸರಳಗೊಳಿಸಿದ ರಾಜ್ಯ ಸರ್ಕಾರ…..

ಬೆಂಗಳೂರು

ಮಹಿಳೆಯರಿಗೆ ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಮಾಡಿದೆ ಹೌದು
ಇದರೊಂದಿಗೆ ರಾಜ್ಯ ಸರಕಾರ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದೆ.ಇನ್ನು ಮುಂದೆ ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿದರೂ ಸಾಕು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಈ ಬಗ್ಗೆ ಆದೇಶವನ್ನು ಹೊರಡಿಸಲಾಗಿದೆ.
ಕರ್ನಾಟಕ ಸರ್ಕಾರವು ಶಕ್ತಿ ಯೋಜನೆಯಡಿ ರಾಜ್ಯದ ಮಹಿಳಾ ಪ್ರಯಾಣಿಕರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ: 179 ದಿನಾಂಕ: 07.06.2023 ರಲ್ಲಿ ಅವಕಾಶವನ್ನು ಕಲ್ಪಿಸಿದ್ದು ಹಾಗೂ ಮುಂದುವರೆದ ಉಲ್ಲೇಖಿತ ಪತ್ರ-ತಿರ ತಿದ್ದುಪಡಿ ಆದೇಶದಲ್ಲಿ ಸದರಿ ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲ ನಕಲು,ಡಿಜಿಲಾಕರ್ ಹಾರ್ಡ್ ಮತ್ತು ಸಾಫ್ಟ್ ಕಾಪಿ ಮಾದರಿಯಲ್ಲಿ ತೋರಿಸಿದಲ್ಲಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ಈ ಒಂದು ಕುರಿತು ಸರಕಾರದ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.ಕೆಲವು ನಿರ್ವಾಹಕರು ಮೊಬೈಲ್ ನೆಲ್ಲಿ ಇದ್ದರೆ ಸಾಲದು ಎಂದು ಮಹಿಳಾ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿರುವುದಾಗಿ, ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ಉಲ್ಲೇಖಿತ ಆದೇಶಗಳಲ್ಲಿ ತಿಳಿಸಿರುವಂತೆ

ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಆಡಚಣೆಯಾಗದಂತೆ ಹಾಗೂ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸುವಂತೆ ಉಲ್ಲೇಖ-4 ರ ಪತ್ರದಲ್ಲಿ ಸೂಚಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.