ಬೆಂಗಳೂರು –
ಪದವೀಧರ ಶಿಕ್ಷಕರ ನೇಮಕಾತಿ ಕುರಿತಂತೆ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.ಹೌದು ಸರ್ಕಾರಿ ಶಾಲೆಗಳಿಗೆ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು ಹೈಕೋರ್ಟ್ ಅಂತಿಮ ತೀರ್ಪಿಗೆ ಒಳಪಡುವ ಷರತ್ತಿನ ಮೇಲೆ ತಂದೆಯ ಆದಾಯ ಪ್ರಮಾಣ ಪತ್ರ ಸಲ್ಲಿಸಿರುವ ಮಹಿಳಾ ಅಭ್ಯರ್ಥಿಗಳನ್ನೂ ಪರಿಗಣಿಸಿ ಶೀಘ್ರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.
ಶಿಕ್ಷಣ ಇಲಾಖೆಯು ಶಿಕ್ಷಕರ ನೇಮಕಾತಿಯಲ್ಲಿ ವಿವಾಹಿತ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು ಆದರೆ ತಂದೆಯ ಆದಾಯ ಪ್ರಮಾಣ ಪತ್ರ ಸಲ್ಲಿಸಿರು ವುದು ನಿಯಮಬಾಹಿರ ಎಂದು ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ ಅಂತಹ ಅಭ್ಯರ್ಥಿಗಳನ್ನು ಕೈಬಿಟ್ಟಿತ್ತು.
ಇದನ್ನು ಪ್ರಶ್ನಿಸಿ ಕೆಲವು ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.ಹೈಕೋರ್ಟ್ ಈ ಬಗ್ಗೆ ಮಧ್ಯಂತರ ಆದೇಶ ನೀಡಿದ್ದು ತಂದೆಯ ಆದಾಯ ಪ್ರಮಾಣ ಪತ್ರ ಸಲ್ಲಿಸಿರುವ ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಪಟ್ಟಿಯಲ್ಲಿ ಪರಿಗಣಿಸಿ ಜೊತೆಗೆ ಅಂತಿಮ ತೀರ್ಪಿಗೆ ಒಳಪಡುವ ಷರತ್ತಿ ನೊಂದಿಗೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮುಂದು ವರೆಸಲು ಸೂಚಿಸಿದ್ದು ಮುಂದೇನಾಗುತ್ತದೆ ಎಂಬೊದನ್ನು ಕಾದು ನೋಡಬೇಕಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..