ಬೆಂಗಳೂರು –
ರಜೆ ಪಡೆಯದೆ ಅನಧಿಕೃತವಾಗಿ ಗೈರುಹಾಜರಾ ಗುವ ಅಧಿಕಾರಿಗಳು, ನೌಕರರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆಯನ್ನು ರಾಜ್ಯ ಸರ್ಕಾರ ನೀಡಿದೆ ಹೌದು ರಾಜ್ಯ ಸರ್ಕಾರಿ ನೌಕರರು ರಜೆ ಪಡೆಯದೇ ಅನಧಿಕೃತವಾಗಿ ಕೆಲಸಕ್ಕೆ ಗೈರು ಹಾಜರಾಗುವುದು ದುರ್ನಡತೆ ತೋರಿದಂತೆ. ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ವಿಧಾನ ಪರಿಷತ್ ಅಧೀನ ಕಾರ್ಯದರ್ಶಿ ಜ್ಯೋತಿ ಸುತ್ತೋಲೆ ಹೊರಡಿಸಿದ್ದಾರೆ.
ವಿಧಾನ ಪರಿಷತ್ ಸಚಿವಾಲಯದ ಅಧಿಕಾರಿ ಗಳು, ನೌಕರರು ಕಚೇರಿಗೆ ಅನಧಿಕೃತವಾಗಿ ಗೈರು ಹಾಜರಾದಲ್ಲಿ ಅಂಥವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿ ದ್ದಾರೆ.ರಜೆ ಪಡೆಯದೆ ಅನಧಿಕೃತವಾಗಿ ಕೆಲಸಕ್ಕೆ ಗೈರು ಹಾಜರಾಗುವುದು ದುರ್ನಡತೆ ತೋರಿ ದಂತೆ. ಅಂತಹ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಬಹುದು. ಉದ್ಯೋಗಕ್ಕೆ ಹಾಜರಾಗಬೇ ಕಾದ ಸಮಯದಲ್ಲಿ ಸಕಾರಣವಿಲ್ಲದೆ ಗೈರು ಹಾಜರಾಗಬಾರದು
ಎಂಬ ಹೊಣೆಗಾರಿಕೆ ಉದ್ಯೋಗಿಗಳ ಮೇಲಿ ರುತ್ತದೆ. ರಜೆ ಮಂಜೂರಾಗದೆ ಗೈರಾಗುವುದನ್ನು ಹಕ್ಕು ಎಂದು ಉದ್ಯೋಗಿಗಳು ಪರಿಗಣಿಸಬಾ ರದು. ಕಚೇರಿಗೆ ಅನಧಿಕೃತವಾಗಿ ಗೈರಾಗುವ ತಪ್ಪಿತಸ್ಥ ಉದ್ಯೋಗಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವುದು ಸಮರ್ಥನೀಯವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸಚಿವಾಲ ಯದ ಎಲ್ಲಾ ಅಧಿಕಾರಿಗಳು, ನೌಕರರು ರಜೆ ಮೇಲೆ ತೆರಳುವ ಮೊದಲು ಕಡ್ಡಾಯವಾಗಿ ಮೇಲಧಿಕಾರಿಗಳ ಪೂರ್ವಾನುಮತಿ ಪಡೆದು ಕೊಳ್ಳುವಂತೆ ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..