ಬೆಂಗಳೂರು –
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ದಿಂದ ಫೆಬ್ರವರಿ 25 ರಂದು ಮಂಡ್ಯ ದಲ್ಲಿ ರಾಜ್ಯ ಮಟ್ಟದ ಶೈಕ್ಷಣಿಕ ಅಧಿವೇಶನವನ್ನು ಆಯೋಜನೆ ಮಾಡಲಾಗಿದೆ.ಹೌದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಈ ಒಂದು ಅಧಿವೇಶನ ವನ್ನು ಆಯೋಜನೆ ಮಾಡಲಾಗಿದೆ ಎಂದು ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ತಿಳಿಸಿದ್ದಾರೆ
ರಾಜ್ಯ ಮಟ್ಟದ ಈ ಒಂದು ಶೈಕ್ಷಣಿಕ ಅಧಿವೇಶನದಲ್ಲಿ ಸರ್ವ ಸದಸ್ಯರ ಸಭೆ ಮತ್ತು ರಾಜ್ಯ ಮಟ್ಟದ ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯ ಲಿದ್ದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಚಾಲನೆ ನೀಡಲಿದ್ದಾರೆ ಎಂದರು.
ಇನ್ನೂ ಸಭೆಯಲ್ಲಿ ಪ್ರಮುಖವಾಗಿ ಸಿ ಆಂಡ್ ಆರ್ ಸಮಸ್ಯೆ ಕುರಿತು ಚರ್ಚೆ,ಪದವೀಧರ ಶಿಕ್ಷಕರ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಚರ್ಚೆ,ಇದರೊಂದಿಗೆ ರಾಜ್ಯದ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರ ಮೇಲೆ ಆಗುತ್ತಿರುವ ಒತ್ತಡ ಕಾರ್ಯಗಳ ಬಗ್ಗೆ ಯೂ ಚರ್ಚೆ ಮತ್ತು ಶಿಕ್ಷಕರ ವರ್ಗಾವಣೆ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ತಿಳಿಸಿದ್ದಾರೆ. ಇದರೊಂದಿಗೆ ಸರ್ವರಿಗೂ ಸ್ವಾಗತ ವನ್ನು ಕೋರಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..