ದಾವಣಗೆರೆ –
ಮಹಾ ಸಮ್ಮೇಳನದಲ್ಲಿ ಸರ್ಕಾರಿ ನೌಕರರಿಗೆ ಸಿಗಲಿದೆ ಗುಡ್ ನ್ಯೂಸ್ – ವಿಶ್ವಾಸವ್ಯಕ್ತಪಡಿಸಿದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಹೌದು
ಫೆಬ್ರುವರಿ 27 ರಂದು ಬೆಂಗಳೂರಿನಲ್ಲಿ ನಡೆ ಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಮಹಾ ಸಮ್ಮೇಳನದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಗಲಿದೆ ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿಯ ವರು ಹೇಳಿದರು.ದಾವಣಗೆರೆಯಲ್ಲಿ ಮಾತನಾ ಡಿದ ಅವರು ಈ ಒಂದು ಐತಿಹಾಸಿಕ ಸಮಾರಂ ಭದಲ್ಲಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಸಮ್ಮೇಳನದಲ್ಲಿ 7ನೇ ವೇತನ ಆಯೋಗ,ಉಚಿತ ಆರೋಗ್ಯ ಯೋಜನೆ ಜಾರಿ ಘೋಷಣೆ ಸಾಧ್ಯತೆ ಇದೆ ಈ ಒಂದು ನಿರೀಕ್ಷೆಯಲ್ಲಿ ನಾವುಗಳು ಇದ್ದೇವೆ ಎಂದರು.ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನದಲ್ಲಿ 7ನೇ ವೇತನ ಆಯೋ ಗದ ವರದಿ ಜಾರಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾ ಮಯ್ಯ ಘೋಷಣೆ ಮಾಡುವ ವಿಶ್ವಾಸವಿದೆ ಎಂದರು.
ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮಹಾ ಸಮ್ಮೇಳನದಲ್ಲಿ ಭಾಗವಹಿಸಲಿರುವ ಮುಖ್ಯಮಂ ತ್ರಿಗಳು 7ನೇ ವೇತನ ಆಯೋಗ ವರದಿ ಅನು ಷ್ಠಾನ ಉಚಿತ ಆರೋಗ್ಯ ಯೋಜನೆ ಸೇರಿ ಹಲವು ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ ಮಹಾ ಸಮ್ಮೇಳನದಲ್ಲಿ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..