ಬೆಂಗಳೂರು –
ರಾಜ್ಯದ ಸರ್ಕಾರಿ ನೌಕರರಿಗೆ ಹೊಸದಾಗಿ 7ನೇ ವೇತನ ಆಯೋಗ ವನ್ನು ರಚನೆ ಮಾಡಿ ಈ ಒಂದು ವಿಚಾರ ಕುರಿತು ಆದೇಶವಾಗಿದ್ದು ಇದರ ಬೆನ್ನಲ್ಲೇ ಈಗ ಸಮಿತಿ ಗೆ ಸಿಬ್ಬಂದಿ ಗಳನ್ನು ಕೂಡಾ ನೀಡಲಾಗಿದೆ ಇದರ ಬೆನ್ನಲ್ಲೇ ಇಗ ರಾಜ್ಯದ ಸರ್ಕಾರಿ ನೌಕರರ ಪರವಾಗಿ ಸಂಘವು ಸಮಿತಿ ಬಳಿ ಹೊಸದೊಂದು ಬೇಡಿಕೆ ಯನ್ನು ಇಟ್ಟಿದೆ.
ಹೌದು ಈಗ ಹೊಸದೊಂದು ಬೇಡಿಕೆಯನ್ನು ಸರ್ಕಾರಿ ನೌಕರರ ಸಂಘದದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ರಾಜ್ಯದ ಸಮಸ್ತ ಸರ್ಕಾರಿ ನೌಕರರ ಪರವಾಗಿ ಸಂಘದ ಕೆಲವೊಂದಿಷ್ಟು ಬೇಡಿಕೆಗಳನ್ನು ಇಟ್ಟಿದ್ದಾರೆ.ಹಾಲಿ ಪಡೆಯುತ್ತಿ ರುವ ಡಿಎ ವನ್ನು ಮೂಲವೇತನದೊಂದಿಗೆ ಸೇರಿಸಿ ಅದರ ಆಧಾರದಲ್ಲಿ ವೇತನ ಪರಿಷ್ಕರಣೆ ಮಾಡಬೇಕು ಮತ್ತು ಮೂಲ ವೇತನದ ಮೇಲೆ ಶೇ.30ರಿಂದ 40ರಷ್ಟು ವೇತನ ಹೆಚ್ಚಳ ಆಗಬೇಕು ಎಂದು ಒತ್ತಾಯ ಮಾಡಿದ್ದಾರೆ.
2022ರ ಜುಲೈ 1 ರಿಂದ ಅನ್ವಯವಾಗುವಂತೆ ಪರಿಷ್ಕರಣೆಯಾಗಬೇಕು. 2023ರ ಜನವರಿ ಯಿಂದ ಆರ್ಥಿಕ ಅನುಕೂಲ ಆಗಬೇಕು ಎಂಬುದು ಸರ್ಕಾರಿ ನೌಕರರ ಸಂಘದ ಆಗ್ರಹವಾಗಿದೆ.ಇದರೊಂದಿಗೆ ಈ ಕೇಂದ್ರ ಸರ್ಕಾರದ ಮಾದರಿಯಲ್ಲಿ ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ ಹಾಗೂ ವಿಶೇಷ ಭತ್ಯೆ ಪರಿಷ್ಕರಣೆ ಮಾಡಬೇಕು.
ವಿವಿಧ ಇಲಾಖಾ ವೃಂದಗಳ ವೇತನ ಶ್ರೇಣಿಯ ಲ್ಲಿನ ತಾರತಮ್ಯ ಸರಿಪಡಿಸಬೇಕು. 2.5 ಲಕ್ಷ ಖಾಲಿ ಹುದ್ದೆ ಭರ್ತಿ ಮಾಡಬೇಕು.ಕಳೆದ ಆಯೋಗದ ಅವಧಿ ಮುಗಿದಲ್ಲಿಂದಲೇ ಕಾಲ್ಪನಿಕ ವೇತನ ಸೌಲಭ್ಯ ಕಲ್ಪಿಸಬೇಕು ಎಂಬ ಬೇಡಿಕೆ ಇಡಲಾಗಿದೆ.
ಸುದ್ದಿ ಸಂತೆ ನ್ಯೂಸ್…..