ಮಂಡ್ಯ –
ಹೌದು ಇಂತಹ ದೊಂದು ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ, 29 ವಿದ್ಯಾರ್ಥಿಗಳ ಅಸ್ವಸ್ಥಗೊಂಡಿರುವ ಘೋರ ದುರಂತ ಘಟನೆ ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಲ್ಲಿ ಬಿದ್ದ ಬಿಸಿಯೂಟದಲ್ಲಿ ಸೇವಿಸಿದ 19 ವಿದ್ಯಾರ್ಥಿನಿಯರು, 10 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 29 ಮಂದಿ ಅಸ್ವಸ್ಥ ಗೊಂಡಿದ್ದಾರೆ
ವಿದ್ಯಾರ್ಥಿಗಳ ವಾಂತಿ ಭೇದಿಯಿಂದ ಬಳಲುತ್ತಿದ್ದಾರೆ. ಹೀಗಾಗಿ ಕೂಡಲೇ ಜಿಲ್ಲೆಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕೆ.ಎಂ ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.