ಬೆಂಗಳೂರು –
ಕರೋನಾ ದಿಂದಾಗಿ ತಡವಾಗಿ ಆರಂಭವಾಗಿದ್ದ ಶಾಲೆಗ ಳನ್ನು ಬರುವ ಶೈಕ್ಷಣಿಕ ವರ್ಷದಲ್ಲಿ ಬೇಗನೆ ಆರಂಭ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದ್ದು ಬೇಸಿಗೆಯ ರಜೆಯನ್ನು ಕಡಿತಗೊಳಿಸಿ ಬೇಗನೆ ಶಾಲೆಗಳನ್ನು ಆರಂಭ ಮಾಡಲು ತೀರ್ಮಾನವನ್ನು ಕೈಗೊಳ್ಳಲಾಗಿದೆ.ಹೀಗಾಗಿ ಬೇಸಿಗೆ ಈ ಹಿಂದೆ ಶಾಲಾ ಶೈಕ್ಷಣಿಕ ವರ್ಷವು ಮೇ.29ರಿಂದ ಆರಂಭವಾಗಿ ಎಪ್ರಿಲ್ 10ಕ್ಕೆ ಮುಕ್ತಾಯವಾಗುತ್ತಿತ್ತು. ಆದರೆ ಈ ಬಾರಿ ಬದಲಾದ ಪರಿಸ್ಥಿತಿಗೆ ಅನುಗುಣವಾಗಿ ಬೇಗವೇ ಶಾಲೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ.
ಹೀಗಾಗಿ ಮೇ.16ರಿಂದ 2022-23ರ ಶೈಕ್ಷಣಿಕ ವರ್ಷ ಆರಂಭವಾಗಲಿದೆ.ಹೀಗಾಗಿ ಈ ಬಾರಿ ಎಪ್ರಿಲ್ 10ರಿಂದ ಮೇ.15ರವರೆಗೆ ಬೇಸಿಗೆ ರಜೆ ನೀಡಲು ಸರ್ಕಾರ ನಿರ್ಧರಿ ಸಿದೆ. ಮುಂದಿನ ಶೈಕ್ಷಣಿಕ ವರ್ಷ ಮೇ.16ರಿಂದ ಆರಂಭ ವಾಗಲಿದೆ.ಕೋವಿಡ್ ಕಾರಣದಿಂದ ನಿರಂತರವಾಗಿ ಭೌತಿಕ ತರಗತಿಗಳು ನಡೆಯದೆ
ಆನ್ ಲೈನ್ ಶಿಕ್ಷಣ ಪರಿಣಾಮಕಾರಿಯಾಗಿಲ್ಲ. ವಿದ್ಯಾರ್ಥಿ ಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ.ಹೀಗಾಗಿ ಈ ಕಲಿಕಾ ಹಿನ್ನಡೆಯನ್ನು ಸರಿದೂಗಿಸಲು ಕಲಿಕಾ ಚೇತರಿಕಾ ಕಾರ್ಯ ಕ್ರಮವನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಆಯೋಜಿಸ ಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.