ಲಕ್ನೋ –
ಕೇಂದ್ರ ಸಚಿವೆ ಸ್ಮೃತಿ ಇರಾನಿ ಕುರಿತು ಅವಹೇಳ ನಕಾರಿ ಫೇಸ್‌ಬುಕ್ ಪೋಸ್ಟ್ ಹಾಕಿದ ಆರೋಪ ದಲ್ಲಿ ಉತ್ತರ ಪ್ರದೇಶದ ಪ್ರಾಧ್ಯಾಪಕರೊಬ್ಬರು ಈಗ ಜೈಲು ಸೇರಿದ್ದಾರೆ.ಹೌದು ಫಿರೋಜಾಬಾದ್‌ನ ಎಸ್‌ಆರ್‌ಕೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಶಹರ್ಯಾರ್ ಅಲಿ ಫೇಸ್‌ಬುಕ್ ನಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು.ಈ ಒಂದು ವಿಚಾರ ಕುರಿತು ಬಂಧನದ ನಂತರ ನ್ಯಾಯಾಲು ಇವರಿಗೆ ಜಾಮೀನು ನೀಡಲು ನಿರಾಕರಿಸಿತ್ತು.
ಫಿರೋಜಾಬಾದ್ ನ್ಯಾಯಾಲಯ ಜೈಲಿಗೆ ಕಳಿಸಿದೆ.
ಫಿರೋಜಾಬಾದ್‌ನ ಎಸ್‌ಆರ್‌ಕೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಶಹರ್ಯಾರ್ ಅಲಿ ಫೇಸ್‌ಬುಕ್‌ನಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರಂತೆ. ತದನಂತ ರ ಕಾಲೇಜಿನ ಆಡಳಿತ ಮಂಡಳಿ ಅವರನ್ನು ಅಮಾ ನತು ಮಾಡಿದೆ.ಶಹರ್ಯಾರ್ ಅಲಿ ತಮ್ಮ ಫೇಸ್ ಬುಕ್ ಖಾತೆ ಹ್ಯಾಕ್ ಹಾಕಿದೆ.ಹಾಗಾಗಿ ತನಗೆ ಬಂಧ ನದ ವಿರುದ್ಧ ರಕ್ಷಣೆ ಕೋರಿ ಅಲಹಾಬಾದ್ ಹೈಕೋ ರ್ಟ್‌ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಫೇಸ್‌ಬುಕ್ ಖಾತೆ ಹ್ಯಾಕ್ ಆಗಿರುವುದಕ್ಕೆ ಯಾವುದೇ ಸಾಕ್ಷಿಗಳಿಲ್ಲ ಎಂದು ನ್ಯಾಯಾಲಯ ತಿಳಿಸಿತ್ತು.ತದನಂತರ ಮೇ ತಿಂಗಳಿ ನಲ್ಲಿ ಶಹರ್ಯಾರ್ ಅಲಿ ಸುಪ್ರೀಂ ಕೋರ್ಟ್ ಮೆಟ್ಟಿ ಲೇರಿದರು ಸಹ ತಮ್ಮ ಬಂಧನದಿಂದ ವಿನಾಯಿತಿ ಪಡೆಯಲು ಸಾಧ್ಯವಾಗಿರಲಿಲ್ಲ.ಈಗ ಅವರು ಫಿರೋಜಾಬಾದ್ ನ್ಯಾಯಾಲಯದಲ್ಲಿ ಮಧ್ಯಂತರ ಜಾಮೀನಿಗೆ ಅರ್ಜಿ ಹಾಕಿದ್ದು ಅಲ್ಲಿಯೂ ಜಾಮೀನು ಸಿಗದ ಕಾರಣ ಜೈಲಿಗೆ ಕಳಿಸಲಾಗಿದೆ.