ತುಮಕೂರು –
ವೈದ್ಯನಾಥನ್ ವರದಿ ಯಥಾವತ್ತಾಗಿ ಅನುಷ್ಠಾ ನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಮತ್ತು ಕ್ಷೇತ್ರ ಶಿಕ್ಷಣಾ ಧಿಕಾರಿ ಸೂರ್ಯಕಲಾ ಅವರಿಗೆ ಮನವಿ ಸಲ್ಲಿಸ ಲಾಯಿತು.
ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸುವುದು ಸಹ ಶಿಕ್ಷಕರಿಗೆ ಸಿಗುವ ಎಲ್ಲಾ ಸೌಲಭ್ಯ ಕಲ್ಪಿಸಬೇಕು.ಮುಖ್ಯ ಶಿಕ್ಷಕರ ಮುಂಬಡ್ತಿ ನೀಡಬೇಕು.ಈ ಹಿಂದೆ ಸರ್ಕಾರ ನೇಮಿಸಿದ್ದ ವೈದ್ಯ ನಾಥನ್ ಸಮಿತಿ ಶಿಫಾರಸು ಯಥಾವತ್ತಾಗಿ ಜಾರಿ ಮಾಡಬೇಕು. ಇಲ್ಲದಿದ್ದರೆ ಪ್ರಸಕ್ತ ಸಾಲಿನ ಎಲ್ಲಾ ಕ್ರೀಡಾಕೂಟಗಳನ್ನು ಬಹಿಷ್ಕರಿಸಲು ನಿರ್ಧರಿಸ. ಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಸ್.ಶಿವಕುಮಾರ್ ಹೇಳಿದರು.
ಹಲವು ವರ್ಷಗಳಿಂದ ನಮ್ಮ ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತಿದೆ. ಪ್ರತಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ಭರವಸೆ ಈಡೇರಿಸುವ ಮಾತುಗಳು ಕೇಳಿ ಬರುತ್ತವೆ. ಇಲಾಖೆಯ ಕ್ರೀಡಾಕೂಟಗಳು ಮುಗಿದರೆ, ಭರವಸೆಯ ಮಾತು ಮರೆತು ಬಿಡುತ್ತಾರೆ.ಈ ಬಾರಿ ಹೋರಾಟದ ಹಾದಿ ತುಳಿಯುವುದು ಅನಿವಾ ರ್ಯವಾಗಿದೆ ಎಂದರು.
ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗ ಳಾದ ಎಚ್.ಆರ್.ಗಂಗಾಧರಯ್ಯ, ಟಿ.ವೈ. ಸುರೇಶ್, ಸತ್ಯನಾರಾಯಣ, ಅನಂತು, ಲೋಕಾನಂದ್, ಪ್ರಭು, ಮಹಾವೀರ್, ಚಿಕ್ಕಣ್ಣ, ನರಸಿಂಹ ಮೂರ್ತಿ, ಪಾಲಾಕ್ಷಪ್ಪ, ಷಡಕ್ಷರಯ್ಯ ಇತರರು ಹಾಜರಿದ್ದರು.
ಸುದ್ದಿ ಸಂತೆ ನ್ಯೂಸ್ ತುಮಕೂರು…..