ಉಪ್ಪಿನಂಗಡಿ –
ಹತ್ತನೇ ತರಗತಿಯಲ್ಲಿ ಓದುತ್ತಿರುವ ಅಪ್ರಾಪ್ತ ಬಾಲಕಿ ಯೋರ್ವಳು ಹೆಣ್ಣು ಮಗುವೊಂದಕ್ಕೆ ಜನ್ಮ ನೀಡಿದ ಘಟನೆ ನಡೆದಿದೆ ಉಪ್ಪಿನಂಗಡಿವಯಲ್ಲಿ ನಡೆದಿದೆ ಘಟನೆ ನಂತರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ
ಹೌದು ಬಂಧಿತ ಆರೋಪಿಯನ್ನು ಹಿರೆಬಂಡಾಡಿ ಗ್ರಾಮದ ಮದ್ಮೆತ್ತಿಮಾರು ಮನೆ ನಿವಾಸಿ ಕೇಶವ (34) ಎಂದು ಗುರುತಿಸಲಾಗಿದೆ.ಪ್ರೌಢ ಶಾಲೆಯೊಂದರಲ್ಲಿ ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕಿಯ ಹೊಟ್ಟೆಯಲ್ಲಿ ಗೆಡ್ಡೆ ಬೆಳೆದಿದೆ ಎಂದು ಭಾವಿಸಿ ಹೆತ್ತವರು ಆಸ್ಪತ್ರೆಗೆ ದಾಖಲಿ ಸಿದಾಗ ಆಕೆ ಗರ್ಭಿಣಿ ಎಂಬುದು ಬೆಳಕಿಗೆ ಬಂದಿತ್ತು ಆಕೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಕರಣ ವನ್ನು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಈ ಕುರಿತು ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ತನ್ನ ಮೇಲೆ ಕೇಶವ ಅತ್ಯಾಚಾರ ಎಸಗಿರುವುದಾಗಿ ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ