ಬೆಂಗಳೂರು –
ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ ಹೇಳಿದ್ದಾರೆ. ಪ್ರಸ್ತುತ ರೈಲ್ವೆ ವಿಭಾಗದ ಎಡಿಜಿಪಿ ಆಗಿದ್ದ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ ಈ ಹಿನ್ನೆಲೆಯಲ್ಲಿ ಭಾವನಾತ್ಮಕ ಟ್ವೀಟ್ ಮಾಡಿರುವ ಅವರು ಕಚೇರಿಯಿಂದ ಮನೆಯ ಕಡೆ ಕೊನೆಯ ಟ್ರಿಪ್ ಎಂದು ಬರೆದು ಸಿಬ್ಬಂದಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ.

2021ರ ಸೆಪ್ಟೆಂಬರ್‌ನಲ್ಲಿ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿ ಸಿದ್ದ ಭಾಸ್ಕರ್ ರಾವ್ ಸರ್ಕಾರವು ಕೂಡಲೇ ಅದನ್ನು ಪರಿಗಣಿಸಬೇಕು ಎಂದು ಕೋರಿದ್ದರು.ಕಳೆದ 7 ತಿಂಗಳಿಂದ ಕೇಂದ್ರ ಸರ್ಕಾರವು ಸ್ವಯಂ ನಿವೃತ್ತಿ ಅರ್ಜಿಗೆ ಅನುಮೋ ದನೆ ನೀಡಿರಲಿಲ್ಲ.ಇದೀಗ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಈ ಬಗ್ಗೆ ಮಾಹಿತಿ ನೀಡಿ ಅಧಿಕಾರ ಹಸ್ತಾಂ ತರ ಮಾಡಿದ್ದಾರೆ.1954ರಲ್ಲಿ ಜನಿಸಿದ್ದ ಭಾಸ್ಕರ್ ರಾವ್ 1990ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದರು. 2019-20ರ ಅವಧಿಯಲ್ಲಿ ಬೆಂಗಳೂರು ನಗರದ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.ರಾಜ್ಯ ಮೀಸಲು ಪೊಲೀಸ್ ಪಡೆ,ಆಂತರಿಕ ಭದ್ರತಾ ವಿಭಾಗ ಸೇರಿದಂತೆ ವಿವಿಧೆಡೆ ಕಾರ್ಯ ನಿರ್ವಹಿಸಿದ್ದರು.


ಭಾಸ್ಕರ್ ರಾವ್ ರಾಜಕೀಯಕ್ಕೆ ಎಂಬ ಮಾತುಗಳು ಕೇಳಿ ಬರುತ್ತಿವೆ ಸದ್ಯ ಭಾಸ್ಕರ್ ರಾವ್ ರಾಜಕೀಯಕ್ಕೆ ಬರುತ್ತಾರೆ ಎಂಬ ಮಾತುಗಳಿವೆ.ಆದರೆ, ಈ ಬಗ್ಗೆ ಅವರಿನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ ಇತ್ತ ನಾಳೆ ದೆಹಲಿ ಯಲ್ಲಿ ಎಎಪಿ ಪಕ್ಷ ಸೇರ್ಪಡೆಯಾಗ ಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು ಏನಾಗಲಿದೆ ಎಂಬುದನ್ನು ಕಾದು ನೋಡಬೇಕು