ಬೆಂಗಳೂರು –
ಪರೀಕ್ಷೆ ಬರೆಯಲಿರುವ ಪುರುಷ ಅಭ್ಯರ್ಥಿಗಳಿಗೆ ಕೋವಿಡ್ ಮಾರ್ಗದರ್ಶಿ ಸೂತ್ರಗಳ ಹಿನ್ನೆಲೆಯಲ್ಲಿ ಅರೆ ಪಾರದರ್ಶಕ ಸರ್ಜಿಕಲ್ ಮಾಸ್ಕ್ ಅರೆದೋಳಿನ ಅಂಗಿ ಮತ್ತು ಸಾದಾ ಪ್ಯಾಂಟ್ ಹಾಗೂ ಚಪ್ಪಲಿಗಳನ್ನು ಕಡ್ಡಾಯ ಗೊಳಿಸಲಾಗಿದೆ.ಹಾಗೆಯೇ ಮಹಿಳಾ ಅಭ್ಯರ್ಥಿಗಳಿಗೆ ಸರ್ಜಿಕಲ್ ಮಾಸ್ಕ್ ಅರೆದೋಳಿನ ಉಡುಪುಗಳನ್ನು ಸೂಚಿಸಲಾಗಿದೆ.
ಪುರುಷರಾಗಲಿ ಮಹಿಳೆಯರಾಗಲಿ ತುಂಬುದೋಳಿನ ಉಡುಪು,ಶೂ,ಆಭರಣ (ಪದಕ, ಮೂಗುಬೊಟ್ಟು, ಕಿವಿ ಯೋಲೆ,ನೆಕ್ಲೇಸ್,ಬ್ರೇಸ್ಲೆಟ್) ಮತ್ತು ಆಲಂಕಾರಿಕ ಉಡು ಪುಗಳನ್ನು ಧರಿಸಿಕೊಂಡು ಬರುವುದನ್ನು ನಿಷೇಧಿಸ ಲಾಗಿದೆ.ಅಭ್ಯರ್ಥಿಗಳಿಗೆ ಯಾವುದೇ ಬ್ರ್ಯಾಂಡ್ ನ ಹೆಸರಿ ಲ್ಲದ ಸಾದಾ ಬಾಟಲಿಯಲ್ಲಿ ಕುಡಿಯುವ ನೀರನ್ನು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಬರಲು ಅವಕಾಶ ಕೊಡಲಾಗಿದೆ ಎಂದು ಪ್ರಾಧಿಕಾರವು ಮಾಹಿತಿ ನೀಡಿದೆ.