ಚಿತ್ರದುರ್ಗ –
ಕೇಂದ್ರ ಸಚಿವ ಸದಾನಂದಗೌಡರಿಗೆ ಶುಗರ್ ಲೇವಲ್ ಕಡಿಮೆಯಾಗಿ ಪಿಟ್ಸ್ ಬಂದು ಮೂರ್ಚೆ ಹೋಗಿದ್ದು ಚಿತ್ರದುರ್ಗದಲ್ಲಿ ಅವರಿಗೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿದ ನಂತರ ಬೆಂಗಳೂರಿಗೆ ಶಿಪ್ಟ್ ಮಾಡಲಾಯಿತು.

ಶಿವಮೊಗ್ಗದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಣಿಯಲ್ಲಿ ಪಾಲ್ಗೊಂಡು ಚಿತ್ರದುರ್ಗ ಮಾರ್ಗದ ಹೊರಟಿದ್ದ ಕೇಂದ್ರ ಸಚಿವ ಸದಾನಂದಗೌಡರಿಗೆ ಚಿತ್ರದುರ್ಗದಲ್ಲಿ ಪಿಟ್ಸ್ ಬಂದು ಮೂರ್ಚೆ ಹೋಗಿದ್ದರು.

ಶುಗರ್ ಲೆವಲ್ ಕಡಿಮೆಯಾಗಿ ಪಿಟ್ಟ್ ಬಂದು ಮೂರ್ಚೆಹೋಗಿದ್ದ ಡಿವಿ ಸದಾನಂದಗೌಡ ರನ್ನು ಅವರೊಂದಿಗೆ ಇದ್ದ ಅಂಗ ರಕ್ಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸಿದ್ದು ಪ್ರಾಥಮಿಕ ಚಿಕಿತ್ಸೆ ಬಳಿಕ ಇವರನ್ನು ಬೆಂಗಳೂರಿನ ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.ಜೀರೋ ಟ್ರಾಫಿಕ್ ನಲ್ಲಿ ಆಂಬ್ಯುಲೆನ್ಸ್ ಮೂಲಕ ಶಿಫ್ಟ್ ಮಾಡಲಾಯಿತು.

ಎಲ್ಲಾ ವ್ಯವಸ್ಥೆ ಮಾಡಿಕೊಂಡು ಚಿತ್ರದುರ್ಗದಿಂದ ಬೆಂಗಳೂರಿನ ತನಕ ಜೀರೋ ಟ್ರಾಫಿಕ್ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ.ಹೆಬ್ಬಾಳದ ಆಸ್ಟರ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಹೆಚ್ಚಿನ ಚಿಕಿತ್ಸೆ ನೀಡಿಸುವ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಸಧ್ಯ ಅವರನ್ನು ಚಿತ್ರದುರ್ಗದಿಂದ ಕರೆದುಕೊಂಡು ಹೋಗಲಾಗಿದೆ.