ಶೀಘ್ರದಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಕಾರ್ಯ ಆರಂಭ – ಮತಗಟ್ಟೆ ಅಧಿಕಾರಿಗಳಿಗೆ ಸಹಕಾರ ನೀಡಲು ಮತದಾರರಲ್ಲಿ ಮಹಾನಗರ ಪಾಲಿಕೆ ಆಯುಕ್ತರ ಮನವಿ…..

Suddi Sante Desk
ಶೀಘ್ರದಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಕಾರ್ಯ ಆರಂಭ – ಮತಗಟ್ಟೆ ಅಧಿಕಾರಿಗಳಿಗೆ ಸಹಕಾರ ನೀಡಲು ಮತದಾರರಲ್ಲಿ ಮಹಾನಗರ ಪಾಲಿಕೆ ಆಯುಕ್ತರ ಮನವಿ…..

ಹುಬ್ಬಳ್ಳಿ ಧಾರವಾಡ

ಶೀಘ್ರದಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಕಾರ್ಯ ಆರಂಭ ಮತದಾರರ ಪಟ್ಟಿಯನ್ನು ಸನ್ 2002 ರ ಮತದಾರರ ಪಟ್ಟಿ ಯೊಂದಿಗೆ ಮ್ಯಾಪಿಂಗ್ ಆಗಿರುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಮತಗಟ್ಟೆ ಅಧಿಕಾರಿಗಳಿಗೆ ಸಹಕಾರ ನೀಡಲು ಮತದಾರರಲ್ಲಿ ಮಹಾನಗರ ಪಾಲಿಕೆ ಆಯುಕ್ತರು ಮನವಿ ಮಾಡಿದ್ದಾರೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ 72, 73 ಮತ್ತು 74 ವಿಧಾನಸಭಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ. ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮುಂಬರುವ ದಿನಗಳಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ 2026 ಕಾರ್ಯ ಪ್ರಾರಂಭವಾಗಲಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ಕಾರ್ಯದ ಪೂರ್ವ ತಯಾರಿಯಲ್ಲಿ ಸನ್ 2025 ರಲ್ಲಿ 40 ವರ್ಷಕ್ಕಿಂತ ಮೇಲ್ಪಟ್ಟ ಮತದಾರರನ್ನು ಸನ್ 2002 ರಲ್ಲಿನ ಮತದಾರರ ಪಟ್ಟಿಯಲ್ಲಿರುವ ಹೆಸರಿನೊಂದಿಗೆ ತಾಳೆ ಮಾಡಿ ಮತದಾರರನ್ನು ಗುರ್ತಿಸಿ ಮ್ಯಾಪಿಂಗ್ ಮಾಡಿಕೊಂಡು ಜೊತೆಗೆ ಮ್ಯಾಪಿಂಗ್ ಮಾಡಲಾದ ಮತದಾರರ ಕುಟುಂಬ ಸಂತತಿಯವರೊಂದಿಗೆ ಪೆÇ್ರಜೆನಿ (ಜೋಡಣೆ) ಕಾರ್ಯವನ್ನು ಕೈಗೊಂಡು ಪೂರ್ಣಗೊಳಿಸಲು ಚುನಾವಣಾ ಆಯೋಗವು ನಿರ್ದೇಶನ ನೀಡಿರುತ್ತದೆ.

ಮತಗಟ್ಟೆ ಮಟ್ಟದ ಅಧಿಕಾರಿ (ಬಿ.ಎಲ್.ಓ)ಗಳು ಪ್ರತಿ ಮನೆ-ಮನೆ ಸಮೀಕ್ಷೆ ಕೈಗೊಂಡು ಮ್ಯಾಪಿಂಗ್ ಕಾರ್ಯವನ್ನು ಕೈಗೊಂಡಿದ್ದರೂ ಸಹ ಈ ಕಾರ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿಯಾಗದೇ ಇರುವುದರಿಂದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಮತದಾರರು ಸಹಕಾರ ನೀಡಬೇಕು ಎಂದು ಅವರು ವಿನಂತಿಸಿದ್ದಾರೆ.

ಮತದಾರರು ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಪ್ರಸ್ತುತ ಮತದಾರರ ಪಟ್ಟಿಯನ್ನು ಸನ್ 2002 ರ ಮತದಾರರ ಪಟ್ಟಿ ಯೊಂದಿಗೆ ಮ್ಯಾಪಿಂಗ್ ಆಗಿರುವುದನ್ನು ನಿಮ್ಮ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ ಪರಿಶೀಲಿಸಿಕೊಳ್ಳಬೇಕು. ಮ್ಯಾಪಿಂಗ್ ಆಗದೇ ಇದ್ದಲ್ಲಿ ಸನ್ 2002 ಮತದಾರರ ಪಟ್ಟಿಯಲ್ಲಿನ ನಿಮ್ಮ ಮಾಹಿತಿಯನ್ನು ಇಂದೇ ನಿಮ್ಮ ಮತಗಟ್ಟೆ ಮಟ್ಟದ ಅಧಿಕಾರಿ (ಬಿ.ಎಲ್.ಓ) ರವರಿಗೆ ನೀಡಿ ಮಾಪಿಂಗ್ ಮಾಡಿಸಿಕೊಳ್ಳಬೇಕು.

ಮ್ಯಾಪಿಂಗ್ ಆಗದೇ ಲಭ್ಯವಿಲ್ಲದಿರುವ ಮತದಾರರನ್ನು ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಹಾಗೂ ಮತದಾರರ ನೋಂದಣಿ ನಿಯಮಗಳನ್ವಯ ಮತದಾರರ ಪಟ್ಟಿಯಿಂದ ಕೈ ಬಿಡಲು ಹಾಗೂ ಸಮೀಕ್ಷೆಗೊಳಪಡಿಸಲು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬಿ.ಎಲ್.ಓ ರವರು ಮತಗಟ್ಟೆ ವ್ಯಾಪ್ತಿಯಲ್ಲಿನ ಮನೆ-ಮನೆ ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದು, ಕಾರಣ ಸಾರ್ವಜನಿಕರು ತಮ್ಮ ಮತ್ತು ತಮ್ಮ ಕುಟುಂಬದವರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸರಿಯಾಗಿ ನಮೂದಿರುವ ಬಗ್ಗೆ ಪರಿಶೀಲಿಸಿಕೊಳ್ಳ ಬೇಕು ಒಂದೇ ಕುಟುಂಬದ ಮತದಾರರು ಬೇರೆ-ಬೇರೆ ಮತ ಗಟ್ಟೆಯಲ್ಲಿ, ಬೇರೆ-ಬೇರೆ ಪ್ರದೇಶಗಳಲ್ಲಿ, ಅಥವಾ ತಪ್ಪಾದ ವಿವರದಲ್ಲಿ ನೋಂದಣಿಯಾಗಿದ್ದಲ್ಲಿ.

ಈ ಕೂಡಲೇ ನಮೂನೆ-8 ರ ಅರ್ಜಿಯನ್ನು ಸೂಕ್ತ ದಾಖಲೆಗ ಳೊಂದಿಗೆ ತಿದ್ದುಪಡಿ, ವರ್ಗಾವಣೆ ಮಾಡಿಸಿಕೊಂಡು ತಮ್ಮ ಕುಟುಂಬದ ಎಲ್ಲ ಸದಸ್ಯರು ಒಂದೇ ಮತಗಟ್ಟೆಯ ಮತದಾರರ ಪಟ್ಟಿಯಲ್ಲಿ ಕ್ರಮವಾಗಿ ಬರುವಂತೆ ನಿಗಾವಹಿಸಬೇಕು. ಕುಟುಂಬ ಸದಸ್ಯರಲ್ಲಿ ಮೃತರಾದವರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಮರಣ ಪ್ರಮಾಣಪತ್ರವನ್ನು ಬಿ.ಎಲ್.ಓ ರವರಿಗೆ ಸಲ್ಲಿಸಿ ನಮೂನೆ-7ರ ಅರ್ಜಿಯನ್ನು ನಮೂದಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ತಮ್ಮ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಅಥವಾ ವಿಧಾನಸಭಾ ಮತಕ್ಷೇತ್ರದ ಚುನಾವಣಾ ಕಾರ್ಯಾ ಲಯಕ್ಕೆ ಭೇಟಿ ನೀಡಿ, ಮಾಹಿತಿಯನ್ನು ಪಡೆದುಕೊಳ್ಳಬೇಕು. ಎಲ್ಲ ಮತದಾರರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ರುದ್ರೇಶ ಘಾಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.