ವಿಜಯಪುರ –
ವಿಧವಾ ವೇತನಕ್ಕೆ ಅರ್ಜಿ ಸಲ್ಲಿಸಲು ಅವಶ್ಯಕತೆ ಇದ್ದ ಆದಾಯ ಪ್ರಮಾಣ ಪತ್ರಕ್ಕೆ ಸಹಿ ಹಾಕಲು ಮೂರು ಸಾವಿರ ಲಂಚ ಸ್ವೀಕರಿಸಿ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರ ಎಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ವಿಧವೆ ಮಹಿಳೆ ಬಳಿ ಲಂಚ ಪಡೆಯಲು ಹೋಗಿ ಇದೀಗ ಜೈಲು ಪಾಲಾಗಿದ್ದಾನೆ.ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ರೋಣಿಹಾಳ ಗ್ರಾಮ ಪಂಚಾಯಿತಿ ಗ್ರಾಮ ಲೆಕ್ಕಾಧಿಕಾರಿ ಬಸವರಾಜು ಎಸಿಬಿ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ.

ರೋಣಿಹಾಳ ಗ್ರಾಮದ ನಿವಾಸಿ ವಿಧವಾ ವೇತನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಕಡಿಮೆ ಆದಾಯ ಇರುವ ಬಗ್ಗೆ ಆದಾಯ ಪ್ರಮಾಣ ಪತ್ರ ಸಲ್ಲಿಸುವಂತೆ ಅರ್ಜಿದಾರ ಮಹಿಳೆಗೆ ಅಧಿಕಾರಿಗಳು ಸೂಚಿಸಿದ್ದರು. ಅದರಂತೆ ಆದಾಯ ಪ್ರಮಾಣ ಪತ್ರ ನೀಡುವಂತೆ ಗ್ರಾಮ ಪಂಚಾಯಿತಿಗೆ ಅರ್ಜಿಯನ್ನು ಕೂಡಾ ನೀಡಿದ್ದರು. ಕಡಿಮೆ ಆದಾಯ ಇರುವ ಬಗ್ಗೆ ದೃಢೀಕರಿಸಿ ಸಹಿ ಮಾಡಲು ಮೂರು ಸಾವಿರ ಲಂಚ ನೀಡುವಂತೆ ಮಹಿಳೆ ಬಳಿ ಬೇಡಿಕೆ ಇಟ್ಟಿದ್ದರು. ಇದರಿದ ಬೇಸತ್ತ ಮಹಿಳೆ ವಿಜಯಪುರ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಗುರುವಾರ ಲಂಚ ಸ್ವೀಕರಿಸುವಾಗ ಬಸವರಾಜು ಎಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಬಂಧನದೊಂದಿಗೆ ಲಂಚದ ಹಣವನ್ನು ಕೂಡಾ ವಶಪಡಿಸಿಕೊಂಡಿದ್ದಾರೆ. ಆರೋಪಿತ ಅಧಿಕಾರಿ ಯನ್ನು ವಿಚಾರಣೆಗೆ ಒಳಪಡಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.ಎಸಿಬಿ ಎಸ್ಪಿ ಬಿ ಎಸ್ ನೇಮಗೌಡ ಮಾರ್ಗದರ್ಶನದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ಮಾಡಿದ್ದಾರೆ.