ಡಿಮ್ಹಾನ್ಸ್ ನಲ್ಲಿ ವಿಶ್ವ ಮೆದುಳು ದಿನ ಕಾರ್ಯಕ್ರಮ – ಅರ್ಥಪೂರ್ಣವಾಗಿ ನಡೆಯಿತು ಕಾರ್ಯಕ್ರಮ…..

Suddi Sante Desk
ಡಿಮ್ಹಾನ್ಸ್ ನಲ್ಲಿ ವಿಶ್ವ ಮೆದುಳು ದಿನ ಕಾರ್ಯಕ್ರಮ – ಅರ್ಥಪೂರ್ಣವಾಗಿ ನಡೆಯಿತು ಕಾರ್ಯಕ್ರಮ…..

ಧಾರವಾಡ

ಡಿಮ್ಹಾನ್ಸ್‍ನಲ್ಲಿ ಜರುಗಿದ ವಿಶ್ವ ಮೆದುಳು ದಿನ ಕಾರ್ಯಕ್ರಮ ಹೌದು ಮೆದುಳು ನಮ್ಮ ದೇಹದ ಪ್ರಮುಖ ಅಂಗವಾಗಿದೆ ಇದು ನಮ್ಮ ಆಲೋಚನೆ, ಚಲನೆ, ಭಾವನೆಗಳು ಮತ್ತು ಇಡೀ ದೇಹದ ಕಾರ್ಯ ವೈಖರಿಯನ್ನು ನಿಯಂತ್ರಿಸುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಪರಶುರಾಮ ಎಫ್.ಕೆ.ಹೇಳಿದರು

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಮಾನಸಿಕ ಹಾಗೂ ನರ ವಿಜ್ಞಾನಗಳ ಸಂಸ್ಥೆ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ವಿಭಾಗ, ಧಾರವಾಡ, ಜಿಲ್ಲಾ ಐ.ಇ.ಸಿ. ವಿಭಾಗ, ಜಿಲ್ಲಾ ತಾಲ್ಲೂಕಾ ಆರೋಗ್ಯ ಅಧಿಕಾರಿಗಳ ಕಚೇರಿ, ಧಾರವಾಡ ಇವರ ಸಹ ಯೋಗದೊಂದಿಗೆ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ಡಿಮ್ಹಾನ್ಸ್) ಆವರಣದಲ್ಲಿರುವ ಸಭಾಂಗಣದಲ್ಲಿ ವಿಶ್ವ ಮೆದುಳು ದಿನದ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಮೆದುಳಿನ ಆರೋಗ್ಯವು ಪ್ರತಿಯೊಬ್ಬರ ಹಕ್ಕು, ನಗರ ಅಥವಾ ಗ್ರಾಮ ಶ್ರೀಮಂತ ಅಥವಾ ಬಡವ ಎಂಬ ಭೇದವಿಲ್ಲದೆ ಎಲ್ಲರಿಗೂ ಗುಣಮಟ್ಟದ ನರರೋಗ ತಪಾಸಣೆ, ಸಮಯೋಜಿತ ಚಿಕಿತ್ಸೆ ಮತ್ತು ಪುನರ್ವಸತಿ ಸೇವೆಗಳು ಎಲ್ಲರಿಗೂ ಲಭ್ಯವಾಗ ಬೇಕು, ಪಾಶ್ರ್ವವಾಯು, ಅಪಸ್ಮಾರ, ಡಿಮೆನ್ಸಿಯಾ, ಪಾರ್ಕಿನ್ಸನ್, ಮೈಗ್ರೇನ ಮತ್ತು ಇತರ ನರ ರೋಗಗಳನ್ನು ಬೇಗ ಗುರ್ತಿಸಿ ಚಿಕಿತ್ಸೆ ನೀಡುವುದು ಅತ್ಯಂತ ಮುಖ್ಯ.

ಆರೋಗ್ಯಕರ ಆಹಾರ, ನಿಯಮಿತ ವ್ಯಾಯಾಮ, ಸಾಕಷ್ಟು ನಿದ್ರೆ, ರಕ್ತದೊತ್ತಡ ಮತ್ತು ಮಧುಮೇಹ ನಿಯಂತ್ರಣ ಧೂಮಪಾನ ಮತ್ತು ಮಧ್ಯಪಾನದಿಂದ ದೂರವಿರುವುದು ಮೆದುಳಿನ ಆರೋಗ್ಯ ಕಾಪಾಡಲು ಸಹಕಾರಿ ಎಂದರು.

 

ಮೆದುಳಿನ ಕಾಯಿಲೆಗಳ ಬಗ್ಗೆ ತಪ್ಪು ಕಲ್ಪನೆ ಮತ್ತು ತಾರತಮ್ಯ ವನ್ನು ನಿವಾರಿಸಿ ಎಲ್ಲರಿಗೂ ಸಮಾನ ಆರೋಗ್ಯ ಸೇವೆ ಒದಗಿಸ ಬೇಕು. ಜಾಗೃತಿ, ಶಿಕ್ಷಣ, ಸಂಶೋಧನೆ ಮತ್ತು ಆರೋಗ್ಯ ಸೇವೆಗಳ ಲಭ್ಯತೆ ಹೆಚ್ಚಿಸುವ ಮೂಲಕ ಕಾಯಿಲೆಗಳ ಭಾರವನ್ನು ಕಡಿಮೆ ಮಾಡಬಹುದೆಂದು ತಿಳಿಸಿದರು.

ಡಿಮ್ಹಾನ್ಸ್ ಸಂಸ್ಥೆಯ ಮೆಡಿಕಲ್ ಸುಪ್ರಿಡೆಂಟ್ ಡಾ. ರಾಘವೇಂದ್ರ ನಾಯಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ,ವಿಶ್ವಮೆದುಳು ದಿನವನ್ನು ಜುಲೈ-22 ರಂದು ಪ್ರತಿ ವರ್ಷ ಆಚರಿಸಲಾಗುತ್ತದೆ. ಮೆದುಳಿನ ಆರೋಗ್ಯದ ಮಹತ್ವ, ನರ ಸಂಬಂಧಿ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಆರಂಭಿಕ ಚಿಕಿತ್ಸೆಯ ಪ್ರಯೋಜನಗಳ ಬಗ್ಗೆ ತಿಳಿಸಿದರು.

ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ ಗಾಬಿ ಅವರು ಮಾತನಾಡಿ, ಆರೋಗ್ಯಕರ ಮೆದುಳು ಎಂದರೆ ಆರೋಗ್ಯಕರ ಜೀವನ, ಮೆದುಳಿನ ಆರೋಗ್ಯವನ್ನು ಕಾಪಾಡು ವುದು ವ್ಯಕ್ತಿ, ಕುಟುಂಬ ಮತ್ತು ಸಮಾಜದ ಜವಾಬ್ದಾರಿಯಾಗಿದೆ. ಎಲ್ಲರಿಗೂ ಮೆದುಳಿನ ಆರೋಗ್ಯ ಸೇವೆಗಳು ಲಬ್ಯವಾಗುವಂತೆ ನಾವು ಒಟ್ಟಾಗಿ ಕಾರ್ಯ ನಿರ್ವಹಿಸೋಣ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಶಶಿಧರ ಕಳಸೂರಮಠ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಮಹೇಶ ಎನ್. ಚಿತ್ತರಗಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಸಂಜಯ ಡುಮ್ಮಗೋಳ, ಜಿಲ್ಲಾ ರೋಗವಾಹಕ ಆಶ್ರಿತ ರೋಗ ಗಳ ನಿಯಂತ್ರಣಾಧಿಕಾರಿ ಡಾ. ಮಂಜುನಾಥ ಎಸ್, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ರವೀಂದ್ರ ಬೊವೇರ, ಜನರಲ್ ಪಿಜಿಶೀಯನ್/ ಇನಚಾರ್ಜ ಕರ್ನಾಟಕ ಮೆದುಳು ಆರೋಗ್ಯ ವಿಭಾಗದ ಡಾ. ಕಿರಣ ಕುಲಕರ್ಣಿ, ತಾಲೂಕಾ ಆರೋಗ್ಯಾಧಿಕಾರಿ ಡಾ. ತನುಜಾ ಕೆ.ಎನ್, ಜಿಲ್ಲಾ ಕಾಲರಾ ನಿಯಂತ್ರಣಾಧಿಕಾರಿ ಡಾ. ಗೌರಿ ಬೆಲ್ಲದ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್. ಪಾತ್ರೋಟ, ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುಧಾ ತಿವಾರಿ, ಇಲಾಖೆಯ ಎಲ್ಲ ಸಮುದಾಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದರು ಉಪಸ್ಥಿತರಿದ್ದರು.

ಡಿಮ್ಹಾನ್ಸ್ ಸಹಾಯಕ ಪ್ರಾಧ್ಯಾಪಕ ಡಾ. ಮೇಘಮಾಲಾ ತಾವರಗೇರಿ ಅವರು ಉಪನ್ಯಾಸ ನೀಡಿದರು.ಕಾರ್ಯಕ್ರಮದಲ್ಲಿ ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಮ್.ಎನ್ ಅಗಡಿ ಸ್ವಾಗತಿಸಿ, ನಿರೂಪಿಸಿದರು. ಅಂಜುಮ್ ನದಾಫ್ ವಂದಿಸಿದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.